ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಕೊಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Lingaraj Badiger
Updated On : 22 Feb 2013, 11:58 am

ವಿಟ್ಲ: ಇಲ್ಲಿಯ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ತನ್ನ ತಾಯಿಯ ತಲೆಗೆ ಮರದ ತುಂಡಿನಿಂದ ಹೊಡೆದು ಹತ್ಯೆಗೈದ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಪಿಲಿಂಜ ನಿವಾಸಿ ಡೊಂಬಯ್ಯ ಪೂಜಾರಿ (51) ಎಂಬಾತನೇ ಆರೋಪಿ. ಈತ ಮಂಗಳವಾರ ರಾತ್ರಿ ಪಾನಮತ್ತನಾಗಿ ಮನೆಗೆ ಬಂದು ತನ್ನ ತಾಯಿ ಸಂಕಮ್ಮ (75) ಎಂಬಾಕೆಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮರದ ತುಂಡಿನಿಂದ ಆಕೆಯ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ. ಬಳಿಕ ಆತನ ಪತ್ನಿ ಲಲಿತಾ ದೂರಿನ ಮೇರೆಗೆ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದರು. ಗುರುವಾರ ಆರೋಪಿ ಡೊಂಬಯ್ಯ ಪೂಜಾರಿಯನ್ನು ವಿಟ್ಲ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement