ಪಾಲಿಕೆ ಆಡಳಿತಾಧಿಕಾರಿ ಜಿಲ್ಲಾಧಿಕಾರಿ
ಮಂಗಳೂರು: ಮಹಾನಗರ ಪಾಲಿಕೆ ಆಡಳಿತ ಸುಸೂತ್ರವಾಗಿ ನಡೆಯಲಿದ್ದು, ಕುಡಿಯುವ ನೀರು ಪೂರೈಕೆ ಬೇಸಗೆಯಲ್ಲಿ ಅಬಾಧಿತವಾಗಿರಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಗುರುವಾರ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಪ್ರಕಾಶ್ ಹೇಳಿದರು. ಪಾಲಿಕೆಯು ತನ್ನೆಲ್ಲ ಕರ್ತವ್ಯಗಳನ್ನು ನಿರ್ವಹಿಸಲಿದ್ದು, ಪ್ರಗತಿಯಲ್ಲಿರುವ ಕಾಮಗಾರಿಗಳು ಮುಂದುವರಿಯಲಿದೆ. ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ ಎಂದ ಅವರು, ತ್ಯಾಜ್ಯ ವಿಲೇಗೆ ಹೆಚ್ಚಿನ ಒತ್ತು ನೀಡಲಿದ್ದು, ನಗರ ಶುಚಿತ್ವ ಮತ್ತು ತ್ಯಾಜ್ಯ ವಿಲೇಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಪಾಲಿಕೆ ಆಯುಕ್ತ ಡಾ.ಹರೀಶ್ ಕುಮಾರ್, ಜಂಟಿ ಆಯುಕ್ತ ಶ್ರೀಕಾಂತ್, ಅಧೀಕ್ಷಕ ಅಭಿಯಂತರ ಬಿ.ಎಸ್.ಬಾಲಕೃಷ್ಣ, ವಿವಿಧ ಇಲಾಖಾ ಮುಖ್ಯಸ್ಥರು ಹಾಜರಿದ್ದರು.