ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ದೆಹಲಿ: ನಾಳೆ ತುಳು ಐಸಿರಿ ಸಮ್ಮೇಳನ

Mainashree
Updated On : 23 Feb 2013, 10:57 am

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಫೆ. 24 ರಂದು ದೆಹಲಿಯಲ್ಲಿ 'ತುಳು ಐಸಿರಿ'ತುಳು ಸಮ್ಮೇಳನ ನಡೆಯಲಿದೆ.
 ದೆಹಲಿಯ ತುಳು ಐಸಿರಿ ಮತ್ತು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಬಂಟ್ವಾಳದ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಉಪಕುಲಪತಿ ಡಾ.ಬಿ.ಎ. ವಿವೇಕ ರೈ ಅಧ್ಯಕ್ಷತೆ ವಹಿಸುವರು. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ ಉದ್ಘಾಟಿಸುವರು ಎಂದು ದೆಹಲಿ ತುಳು ಐಸಿರಿ ಸಂಚಾಲಕ ವಸಂತ ಶೆಟ್ಟಿ ಬೆಳ್ಳಾರೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
 ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಿ ರಾಷ್ಟ್ರೀಯ ಭಾಷೆಯಾಗಿ ಮಾನ್ಯತೆ ದೊರಕಬೇಕೆಂಬ ಉದ್ದೇಶದಿಂದ ಸಮ್ಮೇಳನವನ್ನು ನಡೆಸಲಾಗುತ್ತಿದೆ. ಸಮ್ಮೇಳನವು ಕನ್ನಡ ಭಾಷಿಕರಿಗೆ ಅರ್ಥವಾಗುವ ಸಲುವಾಗಿ ತುಳು ಕಾರ್ಯಕ್ರಮವನ್ನು ಕನ್ನಡದಲ್ಲಿ ನಡೆಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹಕಾರದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ರು. 10ಲಕ್ಷ ಬಿಡುಗಡೆಯಾಗಿದೆ ಎಂದರು.
 ರಾಜ್ಯಸಭಾ ಆಸ್ಕರ್ ಫರ್ನಾಂಡಿಸ್, ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಜಯಪ್ರಕಾಶ್ ಹೆಗ್ಡೆ ಬೆಂಬಲದೊಂದಿಗೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು. ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಕೆ. ರೆಹಮಾನ್ ಖಾನ್, ಕೆ.ಎಚ್. ಮುನಿಯಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಮೋಹನ್ ಆಳ್ವ ಪಾಲ್ಗೊಳ್ಳುವರು. ಸಾಂಸ್ಕೃತಿಕ ಸಮಾರಂಭವನ್ನು ಚಿತ್ರನಟಿ ಜಯಮಾಲ ಉದ್ಘಾಟಿಸುವರು. ಗುರುಕಿರಣ್, ದುನಿಯಾ ರಶ್ಮಿ, ಅನುಷ್ಕಾ ಶೆಟ್ಟಿ ಭಾಗವಹಿಸುವರು. ಹಾಡುಗಾರ ಶಶಿಧರ ಕೋಟೆ ಅವರಿಂದ ಸುಗಮ ಸಂಗೀತ, ಮೂಲ್ಕಿ ಚಂದ್ರಹಾಸ ಸುವರ್ಣ ನಿರ್ದೇಶನದಲ್ಲಿ 'ತುಳು ನಾಡ ವೈಭವ' ದೃಶ್ಯ ರೂಪಕ ಪ್ರದರ್ಶನವಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement