ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಸುದ್ದಿ ಸಂಕ್ಷೇಪ

Mainashree
Updated On : 23 Feb 2013, 10:59 am

ಪಾಲಿಕೆಯ ಮೂವರು ಸಿಬ್ಬಂದಿ ಅಮಾನತು
ಮಂಗಳೂರು: ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ಕಾರ್ಯಕ್ಕೆ ಅನಧಿಕೃತವಾಗಿ ಗೈರಾಗಿರುವ ಹಾಗೂ ಚುನಾವಣೆ ಕೆಲಸದಲ್ಲಿ ನಿರ್ಲಕ್ಷ ವಹಿಸಿದ ಪಾಲಿಕೆಯ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ದ್ವಿತೀಯ ದರ್ಜೆ ಸಹಾಯಕರಾದ ರತೀಶ್, ಸುಕೇತ್ ಕುಮಾರ್, ಜವಾನರಾಗ ರಾಜೇಶ್ ಅವರು ರಜೆ ಅರ್ಜಿ ಸಲ್ಲಿಸದೆ, ಬೇಜಾವಾಬ್ದಾರಿಯಿಂದ ನಡೆದುಕೊಂಡು ಚುನಾವಣಾ ಕೆಲಸಕ್ಕೆ ತೊಂದರೆ ಉಂಟುಮಾಡಿರುವ ಕರ್ತವ್ಯಲೋಪ ಮೇಲ್ನೋಟಕ್ಕೆ ಸಾಬೀತಾಗಿದೆ. ಆದ್ದರಿಂದ ಮೂವರನ್ನು ಕರ್ನಾಟಕ ನಾಗರಿಕ ಸೇವೆಗಳು(ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) 1957ರ ಕಾಲಂ 10ರ ಅನ್ವಯ ಅಮಾನತ್ತು ಮಾಡುವಂತೆ ಪಾಲಿಕೆ ಆಯುಕ್ತ ಡಾ. ಹರೀಶ್ ಕುಮಾರ್ ಆದೇಶ ನೀಡಿದ್ದಾರೆ.
ನೋಂದಣಿ ರಹಿತ
ವೈದ್ಯ ಸಂಸ್ಥೆ ರದ್ದು
ಮಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದಂತೆ 2010 ಅಕ್ಟೋಬರ್ 24ರ ಮೊದಲು ಹಾಗೂ ಅನಂತರ ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಈ ತನಕ ಜಿಲ್ಲಾ ನೋಂದಾಣಿ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಂಡಿರದ ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳು ಮಾ. 2ರೊಳಗೆ ನೋಂದಾಯಿಸಿಕೊಳ್ಳದಿದ್ದರೆ ಮುಚ್ಚಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ನೂತನವಾಗಿ ತೆರೆಯುವ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಜಿಲ್ಲಾ ನೋಂದಾಣಿ ಪ್ರಾಧಿಕಾರದಲ್ಲಿ ನೋಂದಾಯಿಸಿ ಕಾರ್ಯಾರಂಭ ಮಾಡಬೇಕು. ಕಾನೂನಿನಲ್ಲಿ ಹೇಳಲಾದ ಸವಲತ್ತುಗಳನ್ನು ಹೊಂದಿರಬೇಕು. ಪ್ರಾಧಿಕಾರದಿಂದ ಅನುಮತಿ ಪಡೆಯದೆ ತೆರೆಯುವ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement