ವಿಶ್ವಾಸಾರ್ಹ ಪಕ್ಷೇತರರಿಗೆ 'ಆಮ್ ಆದ್ಮಿ' ಬೆಂಬಲ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಶ್ವಾಸಾರ್ಹ ಸ್ವತಂತ್ರ ಅಭ್ಯರ್ಥಿಗಳಿಗೆ ಬಹಿರಂಗ ಬೆಂಬಲ ನೀಡುವುದಾಗಿ ಆಮ್ ಆದ್ಮಿ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಪಕ್ಷ ತಕ್ಷಣ ರಾಜ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅದಾಗ್ಯೂ ಸ್ಥಳೀಯ ಚುನಾವಣೆಯಲ್ಲಿ ಅರ್ಹ ಅಭ್ಯರ್ಥಿಗಳ ಗೆಲವಿಗೆ ಆಮ್ ಆದ್ಮಿ ಪಕ್ಷ ರಚನಾತ್ಮಕ ಪ್ರಯತ್ನ ಮಾಡಲಿದೆ ಎಂದರು.
ಪಾಲಿಕೆ ಆಡಳಿತ ಅತಿಯಾದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಹಲವಾರು ನಾಗರಿಕ ಸಮಸ್ಯೆಯಿಂದ ಬಳಲುತ್ತಿದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ದಕ್ಷ, ಪ್ರಾಮಾಣಿಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದು ನಾಗರಿಕರ ಕರ್ತವ್ಯವಾಗಿದೆ.
ನಗರದ ಮತದಾರರು ಚುನಾವಣೆಯಲ್ಲಿ ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಬೇಕು, ಉತ್ತಮ ಅಭ್ಯರ್ಥಿಗೆ ಮತ ನೀಡಬೇಕು ಎಂದು ವಿನಂತಿ ಮಾಡಿದೆ.
ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸ್ವತಂತ್ರ ಅಭ್ಯರ್ಥಿಗಳ ನೆಲೆಯನ್ನು ಪರಿಶೀಲಿಸಿ ಅವರನ್ನು ಬೆಂಬಲಿಸುವ ಪಟ್ಟಿ ಪ್ರಕಟಿಸಲಿದೆ. ಪಕ್ಷ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸ್ವತಂತ್ರ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.