ಮೊರಾರ್ಜಿ ಶಾಲೆಯಿಂದ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಸರ್ಕಾರ ಸ್ಥಾಪಿತ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2013-14ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ 5ನೇ ತರಗತಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಗಳಲ್ಲಿ ಶೇ. 50 ಬಾಲಕಿ, ಬಾಲಕ ವಿದ್ಯಾರ್ಥಿಗಳಿ ಕಾಯ್ದಿರಿಸಲಾಗಿದ್ದು, 6ನೇ ತರಗತಿಯಿಂದ 12ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಬಹುದು.
ಮಾ. 24ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 11 ರಿಂದ 1.30ರ ತನಕ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಮೆರಿಟ್ ಅಂಕಪಟ್ಟಿ ತಯಾರಿಸಿ, ಮೆರಿಟ್, ಮೀಸಲಾತಿ ಆಧಾರದಲ್ಲಿ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ತಾಲೂಕಿನ ವಸತಿ ಶಾಲೆಗಳಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಫೆ. 25 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಮಾಜ ಕಲ್ಯಾಣಾಧಿಕಾರಿ, ವಸತಿ ಶಾಲಾ ಪ್ರಾಂಶುಪಾಲರಿಂದ ಪಡೆಯಬಹುದು.