ಎಸ್ಸಿಡಿಸಿಸಿ ಬ್ಯಾಂಕ್ ಕಟ್ಟಡ ಉದ್ಘಾಟನೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಕಲ್ಲಡ್ಕ ಶಾಖೆ ಕಲ್ಲಡ್ಕದ ಪ್ರೀತಿ ಟವರ್ಸ್ನ ಪ್ರಥಮ ಮಹಡಿಗೆ ಸ್ಥಳಾಂತರಗೊಂಡು ಸೋಮವಾರ ಉದ್ಘಾಟನೆಗೊಂಡಿತು. ಆರ್.ಎಸ್.ಎಸ್.ನ ದಕ್ಷಿಣ ಪ್ರಾಂತ್ಯ ಕಾರ್ಯವಾಹ ಡಾ. ಪ್ರಭಾಕರ ಭಟ್ ಕಲ್ಲಡ್ಕ ದೀಪ ಬೆಳಗಿಸುವ ಮೂಲಕ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ವಹಿಸಿದ್ದರು.
ಮಹಿಳೆಯರ ಆತ್ಮಗೌರವ ಹೆಚ್ಚಿಸುವ ಕೆಲಸವನ್ನು ಸಹಕಾರಿ ಬ್ಯಾಂಕ್ಗಳು ನಡೆಸುತ್ತಿದೆ. ಮುಂದೆಯೂ ಮಹಿಳೆಯರು ಸೇರಿದಂತೆ ಗ್ರಾಹಕರ ಸ್ವಾಭಿಮಾನವನ್ನು ಹೆಚ್ಚಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಬ್ಯಾಂಕ್ ಬದ್ಧವಾಗಿದೆ ಎಂದು ಅವರು ಹೇಳಿದರು.
ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ಬ್ಯಾಂಕ್ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ವಾದಿರಾಜ ಶೆಟ್ಟಿ, ನಿರಂಜನ್, ಸದಾಶಿವ ಬಲ್ಲಾಳ್, ಪಿ. ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಪ್ರೀತಿ ಟವರ್ ಮಾಲಕ ಗಂಗಾಧರ ರೈ ಇದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಮೇಶ್ ಕಲ್ಲಡ್ಕರವರನ್ನು ಸನ್ಮಾನಿಸಲಾಯಿತು. ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ್ ಭಟ್ ಸ್ವಾಗತಿಸಿದರು, ಕಲ್ಲಡ್ಕ ಶಾಲೆಯ ವ್ಯವಸ್ಥಾಪನಾ ನಿರ್ದೇಶಕ ಎಂ. ಗೋಪಾಲಕೃಷ್ಣ ಭಟ್ ವಂದಿಸಿದರು. ಪತ್ರಕರ್ತ ರಾಜಾ ಬಂಟ್ವಾಳ ನಿರ್ವಹಿಸಿದರು.