ಇಂದು ಬಿಜೆಪಿ ಚುನಾವಣಾ ಪ್ರಚಾರ ಸಭೆ
ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ಫೆ.28ರಂದು ಬೆಳಗ್ಗೆ 10.30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ. ಆ ಪ್ರಯುಕ್ತ ಪೂರ್ವಭಾವಿಯಾಗಿ ಬೆಳಗ್ಗೆ 10ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಚುನಾವಣಾ ಪ್ರಚಾರ ಮೆರವಣಿಗೆ ಹೊರಟು ನವಭಾರತ ವೃತ್ತ, ಸಿಗ್ನಲ್ ವೃತ್ತವಾಗಿ ಪುರಭವನಕ್ಕೆ ತಲಪಲಿದೆ. ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಸಭಾ ಉಪಾಧ್ಯಕ್ಷ ಯೋಗೀಶ್ ಭಟ್, ಶಾಸಕ ಕೃಷ್ಣ ಪಾಲೇಮಾರ್, ವಿಧಾನ ಪರಿಷತ್ತು ಸದಸ್ಯರಾದ ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಪಕ್ಷದ ಹಿರಿಯರು ಪಾಲ್ಗೊಳ್ಳುವರು ಎಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.