ಕರ್ಣಾಟಕ ಬ್ಯಾಂಕ್: ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗೆ ಕರ್ಣಾಟಕ ಬ್ಯಾಂಕ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿ ಅಂಗೀಕೃತ ವಿಶ್ವವಿದ್ಯಾಲಯದ ಪದವೀಧರರಾಗಿದ್ದು, ಕಂಪ್ಯೂಟರ್ ಜ್ಞಾನ, ಇಂಗ್ಲಿಷ್ ಮತ್ತು ಹಿಂದಿ ತಿಳಿದಿರಬೇಕು. ಅಭ್ಯರ್ಥಿಗಳ ವಯೋವುತಿ 28 ವರ್ಷ. ಅರ್ಜಿ ಶುಲ್ಕ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 150, ಇತರರಿಗೆ 200. ಆನ್ಲೈನ್ ಆಯ್ಕೆ ಪರೀಕ್ಷೆ ಏ.13ರಂದು ದಾವಣಗೆರೆ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿಗಳಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಕೆಯನ್ನು ಆನ್ಲೈನ್ನಲ್ಲಿ ಮಾ.1ರಿಂದ 15ರ ವರೆಗೆ ಮಾಡಬಹುದು. ವಿವರಕ್ಕೆ http://www.karnatakabank.comಸಂಪರ್ಕಿಸಬಹುದು ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.