ಅಪಘಾತ: ಪಾದಚಾರಿಗೆ ಗಾಯ
ವಿಟ್ಲ: ಪಾದಚಾರಿಯೊಬ್ಬರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಬೊಬ್ಬೆಕೇರಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಬೊಬ್ಬೆಕೇರಿ ಕೋಡಿ ನಿವಾಸಿ ಮೋನಪ್ಪ ಮೂಲ್ಯ ಅವರ ಪುತ್ರ ಸುಂದರ ಕುಲಾಲು (50) ಗಾಯಗೊಂಡವರು.
ಇವರು ಬುಧವಾರ ರಾತ್ರಿ ವಿಟ್ಲದಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಂಗಳೂರು ಕಡೆಗೆ ತೆರಳುತ್ತಿದ್ದ ಮಂಜಪ್ಪ ಗೌಡ ಅವರ ರಿಕ್ಷಾ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಸುಂದರ ಕುಲಾಲು ಅವರ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.