25, 26ರಂದು ವಿದ್ಯುತ್ ವ್ಯತ್ಯಯ
ಮಂಗಳೂರು: 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಗುಲ್ವಾಡಿ ಫೀಡರ್ನಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ. 25 ಹಾಗೂ 26ರಂದು ಹಟ್ಟಿಯಂಗಡಿ, ಹಟ್ಟಿಕುದ್ರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.