ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರ ಬಂಧನ

Mainashree
Updated On : 26 Jan 2013, 11:52 am

ವಿಟ್ಲ: ಕನ್ಯಾನ ಆಸುಪಾಸಿನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕನ್ಯಾನ ಪೇಟೆಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.
ಉರಿಮಜಲು ನಿವಾಸಿ ಲಕ್ಷ್ಮಣ (32) ಮತ್ತು ಕನ್ಯಾನ ನಿವಾಸಿ ಗೋಪಾಲ (30) ಬಂಧಿತರು. ಇವರು ಶುಕ್ರವಾರ ಬೆಳಗ್ಗಿನ ಜಾವ ಮೂರು ಗಂಟೆಗೆ ಕನ್ಯಾನ ಬಸ್ಸು ನಿಲ್ದಾಣದ ಸಮೀಪ ತಿರುಗಾಡುತ್ತಿದ್ದುದನ್ನು ಗಮನಿಸಿದ ರಾತ್ರಿ ಗಸ್ತು ಪಡೆಯ ಎಎಸ್ಐ ಜಯರಾಜ್ ಮತ್ತು ಪ್ರವೀಣ್ ರೈ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲಕ್ಷ್ಮಣ ಈಗಾಗಲೇ ಹಲವಾರು ಪ್ರಕರಣದಲ್ಲಿ ಬಾಗಿಯಾಗಿದ್ದು, ಇಬ್ಬರನ್ನೂ ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ಸೋಮವಾರದವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement