ಜಾನುವಾರು ವಶ
ಕುಂದಾಪುರ: ಅಕ್ರಮವಾಗಿ ಮಾಂಸಕ್ಕಾಗಿ ಜಾನುವಾರುಗಳನ್ನು ಕಡಿಯುತ್ತಿದ್ದ ಇಲ್ಲಿನ ನೇರಳಕಟ್ಟೆ ಸಮೀಪದ ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿನ ಕಾಡಿಗೆ ಶುಕ್ರವಾರ ಪೊಲೀಸರು ದಾಳಿ ನಡೆಸಿ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಆರೋಪಿಗಳು ಮಾತ್ರ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ನಿವಾಸಿ ಅಬೂಬಕ್ಕರ್ ಎನ್ನುವವರಿಗೆ ಸೇರಿದ ಈ ಕಾಡಿನಲ್ಲಿ ಕಳೆದ ಕೆಲ ದಿನಗಳಿಂದ ಅಕ್ರಮವಾಗಿ ಜಾನುವಾರುಗಳನ್ನು ಹಿಡಿದು ತಂದು ಮಾಂಸಕ್ಕಾಗಿ ಕಡಿಯಲಾಗುತ್ತಿದೆ ಎಂಬ ಖಚಿತ ಮಾಹಿತಿಯಂತೆ ಕುಂದಾಪುರ ಅಪರಾಧ ವಿಭಾಗದ ಉಪನಿರೀಕ್ಷಕಿ ರೇವತಿ ಹಾಗೂ ಸಿಬ್ಬಂದಿ ಶುಕ್ರವಾರ ಮಧ್ಯಾಹ್ನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಕ್ರಮವಾಗಿ ಕಟ್ಟಿ ಹಾಕಲಾಗಿದ್ದ 10 ಗಂಡು ಕರುಗಳನ್ನು, ತೂಕದ ಯಂತ್ರ, ಆಯುಧ ಮತ್ತು ಕೊಲ್ಲಲಾದ ಜಾನುವಾರಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಅಕ್ರಮದ ಆರೋಪಿಗಳಾದ ಸಮ್ಮದ್, ಅಬುಬಕರ್ ಸೇರಿದಂತೆ ಇನ್ನೋರ್ವ ತಪ್ಪಿಸಿಕೊಂಡಿದ್ದು ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.