ದಕ್ಷಿಣ ಕನ್ನಡ

ಸುಂಟಿಕೊಪ್ಪ: ಜಿಲ್ಲಾ ಮಟ್ಟದ ಡ್ಯಾನ್ಸ್ ಮೇಳ

ಸುಂಟಿಕೊಪ್ಪ: ಸುಂಟಿಕೊಪ್ಪ ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಡ್ಯಾನ್ಸ್ ಮೇಳ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಬಿ. ಭಾರತೀಶ್ ಮಾತನಾಡಿ, ಸುಂಟಿಕೊಪ್ಪ ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದವರು ಡ್ಯಾನ್ಸ್ ಮೇಳದಂತಹ ನೃತ್ಯ ಸ್ಪರ್ಧಾ ಕಾರ್ಯಕ್ರಮವನ್ನು ಏರ್ಪಡಿಸುವ ಮೂಲಕ ಜಿಲ್ಲೆಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿದೆ ಎಂದು ಶ್ಲಾಘಿಸಿದರು.
ಈ ಸಂದರ್ಭ ತಮಗೆ ನೀಡಲಾದ ಮನವಿಗೆ ಸ್ಪಂದಿಸಿದ ಭಾರತೀಶ್, ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಹಂತ ಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು, ಸುಂಟಿಕೊಪ್ಪದಲ್ಲಿ ಕಲಾ ಮಂದಿರ ನಿರ್ಮಾಣಕ್ಕೆ ರು. 10 ಲಕ್ಷದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದರು.
ತಾ.ಪಂ. ಸದಸ್ಯ ಪಿ.ಎಂ. ಲತೀಫ್ ಮಾತನಾಡಿ, ಸುಂಟಿಕೊಪ್ಪ ಜಿಎಂಪಿ ಶಾಲಾ ಮೈದಾನದಲ್ಲಿ ಕಲಾ ಮಂದಿರ ನಿರ್ಮಾಣಕ್ಕೆ ತಾ.ಪಂ.ಯಿಂದ ರು. 3 ಲಕ್ಷ ಬಿಡುಗಡೆಯಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಗೆ ಭೂಮಿ ಪೂಜೆ ನೆರವೇರಲಿದೆ ಎಂದರು. ಗ್ರಾ.ಪಂ. ಅಧ್ಯಕ್ಷ ಎಂ.ಎ. ಉಸ್ಮಾನ್, ಜಿ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ವಿ.ಪಿ. ಶಶಿಧರ್, ಕಾಫಿ ಬೆಳೆಗಾರ ಡಿ. ವಿನೋದ್ ಶಿವಪ್ಪ ಮಾತನಾಡಿದರು.
ವೇದಿಕೆಯಲ್ಲಿ ಕಾಫಿ ಬೆಳೆಗಾರ ಆನಂದ್ ಬಸಪ್ಪ, ಬೆಂಗಳೂರಿನ ಉದ್ಯಮಿ ಗೌರೀಶ್, ಆರ್‌ಎಂಸಿ ಅಧ್ಯಕ್ಷ ಪಟ್ಟೆಮನೆ ಕೆ. ಶೇಷಪ್ಪ, ಬಿಜೆಪಿ ಹೋಬಳಿ ಅಧ್ಯಕ್ಷ ದಾಸಂಡ ರಮೇಶ್ ಚಂಗಪ್ಪ, ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ಬಿ.ಎಂ. ಸುರೇಶ್, ನಿರ್ಮಲ ಶೇಷಪ್ಪ, ರೋಸ್‌ಮೇರಿ ರಾಡ್ರಿಗಸ್, ಎಂ.ಟಿ. ರಾಣಿ, ಜ್ಯೋತಿ, ವೈ.ಎಸ್. ಸುಮಿತಾ, ಸಂದೀಪ್, ಆನಂದ, ಬಿ.ಎಂ. ವೆಂಕಪ್ಪ, ಕೆ.ಇ. ಕರೀಂ, ರಜಾಕ್, ವಾಹನ ಚಾಲಕರ ಸಂಘದ ಆಧ್ಯಕ್ಷ ಶಂಷುದ್ದೀನ್ ಇದ್ದರು.  ಸಂಘದ ಅಧ್ಯಕ್ಷ ಸಿ.ಸಿ. ಮಂಜುನಾಥ್ ಮನವಿ ವಾಚಿಸಿದರು. ಬಿ.ಕೆ. ಪ್ರಶಾಂತ್ ಸ್ವಾಗತಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ