ಇಂದು ಮೂಲ್ಕಿಗೆ ಕಾಂಗ್ರೆಸ್ ಪಾದಯಾತ್ರೆ
ಮೂಲ್ಕಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ನಡಿಗೆ ಸಾಮರಸ್ಯದ ಕಡೆಗೆ ಪಾದಯಾತ್ರೆ ಬುಧವಾರ ಮಧ್ಯಾಹ್ನ ಹಳೆಯಂಗಡಿಯ ಪಾವಂಜೆ ಸೇತುವೆ ಬಳಿ ಪ್ರವೇಶಿಸಲಿದ್ದು ಬಳಿಕ ಹಳೆಯಂಗಡಿ ಮೂಲಕ ಮೂಲ್ಕಿಗೆ ಆಗಮಿಸಲಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸಭೆ ಮೂಲ್ಕಿ ಬಸ್ ನಿಲ್ದಾಣದ ಬಳಿ ಜರುಗಲಿದ್ದು, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಜಿಲ್ಲಾಧ್ಯಕ್ಷ ಬಿ. ರಮಾನಾಥ ರೈ, ವಿಪಕ್ಷ ಮುಖ್ಯ ಸಚೇತಕ ಕೆ. ಅಭಯಚಂದ್ರ ಜೈನ್ ಭಾಗವಹಿಸಲಿದ್ದಾರೆ.