ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಬಾಲಕಾರ್ಮಿಕ ಪತ್ತೆಗೆ ಮನೆ ಮನೆ ದಾಳಿ

Rashmi Kasaragodu
Updated On : 1 Feb 2013, 12:26 pm


ಮಂಗಳೂರು: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮ ಹೊರತೂ ಕೆಲವೆಡೆ ಮತ್ತೆ ಪ್ರಕರಣ ವರದಿಯಾಗುತ್ತಿದೆ. ಈ ಕುರಿತು ಜಾಗೃತಿ ಮೂಡಿಸಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಕ್ಕಳ ಮಿತ್ರರನ್ನು ನೇಮಿಸಿ ಇಲಾಖೆ ತರಬೇತಿ ನೀಡುತ್ತಿದೆ ಎಂದು ಕಾರ್ಮಿಕ ಆಯುಕ್ತ ಡಿ.ಜೆ.ನಾಗೇಶ್ ತಿಳಿಸಿದ್ದಾರೆ. ಕಾರ್ಮಿಕ ಇಲಾಖಾ ಕಚೇರಿಯಲ್ಲಿ ಬುಧವಾರ ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಬಹುಮಹಡಿ ಕಟ್ಟಡಗಳಲ್ಲಿ ಕೆಲವರು ಬಾಲಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ಬಂದಿದೆ. ಮುಂದಿನ ದಿನಗಳಲ್ಲಿ ಬಾಲಕಾರ್ಮಿಕರನ್ನು ಪತ್ತೆ ಮಾಡಲು ಮನೆ ಮನೆಗೆ ದಾಳಿ ನಡೆಸಲಾಗುವುದು. ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರಿಗೆ ಸ್ಥಳದಲ್ಲೇ ರು. 20 ಸಾವಿರ ದಂಡ ವಿಧಿಸಲಾಗುವುದು ಎಂದರು. ಈಗಾಗಲೇ 2010ರಿಂದ 2012ರ ವರೆಗೆ 17 ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾರ್ಮಿಕ ಅಧಿಕಾರಿ ಮಹೇಶ್, ಆನಂದ ಮೂರ್ತಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement