ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ವಿವಿಧ ಸ್ನಾತಕೋತ್ತರ ಕೋರ್ಸ್‌ಗೆ ಅರ್ಜಿ ಆಹ್ವಾನ

Lingaraj Badiger
Updated On : 22 Jul 2013, 2:08 am

ಮಂಗಳೂರು: 2013-14ನೇ ಸಾಲಿನ ಶೈಕ್ಷಣಿಕ ವರ್ಷದ ಪಾವತಿ ವರ್ಗದಡಿ ಸ್ನಾತಕೋತ್ತರ ಕೋರ್ಸುಗಳನ್ನು ನಡೆಸುತ್ತಿರುವ ಸರ್ಕಾರಿ ಕಾಲೇಜು ಮತ್ತು ವಿಶ್ವವಿದ್ಯಾಲಯ ಸಂಯೋಜಿತ ಖಾಸಗಿ ಕಾಲೇಜುಗಳಲ್ಲಿ ವಿವಿಧ ಕೋರ್ಸಿನ ಸೀಟುಗಳು ಬಾಕಿ ಉಳಿದಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗ, ಸ್ನಾತಕೋತ್ತರ ಕೇಂದ್ರ ಕಾವೇರಿ ಕ್ಯಾಂಪಸ್ ಮಡಿಕೇರಿ, ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವಿಶ್ವವಿದ್ಯಾಲಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕೋತ್ತರ ಕೋರ್ಸುಗಳ ಸೀಟುಗಳು ಬಾಕಿ ಉಳಿದಿವೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರ ಕಚೇರಿಯಿಂದ ಪಡೆದು ಸಂಬಂಧಪಟ್ಟ ವಿಭಾಗಗಳಿಗೆ ಸಲ್ಲಿಸಬಹುದು. ಜು. 26 ಕೊನೆ ದಿನ. ವಿಶ್ವವಿದ್ಯಾಲಯದ ವಿಭಾಗಗಳಲ್ಲಿ ಹಾಗೂ ಶೇ. 50 ಸರ್ಕಾರಿ ಕೋಟಾದಡಿ ಆಯಾಯ ಕೋರ್ಸುಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಜು. 29 ಪ್ರವೇಶಾತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಢಿಢಿಢಿ.ಟಛಟ್ಜಿಛಟ್ಟ್ಠಜ್ಡಟ್ಝಿಢಜ್ಠಡ್ಝಡಿಣ.ಛ್ಛ.್ಝಟಿ 0824-2287314 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
25, 26ರಂದು ರಾಷ್ಟ್ರ ಮಟ್ಟದ ಕಾರ್ಯಾಗಾರ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಭೌತ ಹಾಗೂ ರಸಾಯನ ಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಟೆಕ್ವಿಪ್ ಪ್ರಾಯೋಜಿತ 2 ದಿನಗಳ ರಾಷ್ಟ್ರ ಮಟ್ಟದ ವಿಜ್ಞಾನ, ತಂತ್ರಜ್ಞಾನ ಕಾರ್ಯಗಾರ 25 ಮತ್ತು 26ರಂದು ನಡೆಯಲಿದೆ. ಕಾರ್ಯಾಗಾರವನ್ನು ಮಂಗಳೂರು ವಿವಿ ಕುಲಸಚಿವ(ಪರೀಕ್ಷಾಂಗ) ಡಾ.ಬಿ. ನಾರಯಣ ಉದ್ಘಾಟಿಸಲಿದ್ದು, ಹೈದರಾಬಾದ್ ವಿವಿಯ ಭೌತಶಾಸ್ತ್ರ ಪ್ರಾಧ್ಯಾಪಾಕ ಡಾ. ನಾರಾಯಣ ರಾವ್ ದೇಸಾಯಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲೂಣ್ಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭವು 26ರಂದು ಸಂಜೆ ನಡೆಯಲಿದ್ದು ವಿಟಿಯುನ ಬೆಂಗಳೂರು ವಲಯದ ವಿಶೇಷ ಅಧಿಕಾರಿ ಡಾ. ದಿನೇಶ್ ರಂಗಪ್ಪ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement