ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ವಿಟ್ಲ: ಮುಚ್ಚಳಿಕೆ ಪತ್ರದೊಂದಿಗೆ ಇಬ್ಬರು ವಿದ್ಯಾರ್ಥಿಗಳ ಅಮಾನತು ರದ್ದು

Mainashree
Updated On : 23 Jul 2013, 10:26 am

ವಿಟ್ಲ: ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏಳು ವಿದ್ಯಾರ್ಥಿಗಳು ಅಮಾನತುಗೊಂಡ ವಿಚಾರವಾಗಿ ಇಬ್ಬರು ವಿದ್ಯಾರ್ಥಿಗಳ ಪೋಷಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸೋಮವಾರ ಎಚ್ಚರಿಕೆ ನೀಡಿ, ಮುಚ್ಚಳಿಕೆ ಬರೆಯಿಸಿ ತರಗತಿಗೆ ಸೇರಿಸಿಕೊಳ್ಳಲಾಯಿತು.  ಇನ್ನುಳಿದ ಐವರು ವಿದ್ಯಾರ್ಥಿಗಳ ಅಮಾನತು ಆದೇಶ ಅದೇ ರೀತಿ ಮುಂದುವರಿದಿದೆ.
ಬಿಗಿ ಬಂದೋಬಸ್ತು: ಕಾಲೇಜಿನ ಆವರಣದಲ್ಲಿ ಸೋಮವಾರ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಬಂಟ್ವಾಳದಿಂದ ಒಂದು ತುಕಡಿ ಪೊಲೀಸ್ ಸಿಬ್ಬಂದಿಯನ್ನು ಸಂಜೆ ವರೆಗೆ ನಿಯೋಜಿಸಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿತ್ತು. ಅಮಾನತುಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳ ಪೋಷಕರು ಕಾಲೇಜಿಗೆ ಬಂದು ಪ್ರಾಂಶುಪಾಲರೊಂದಿಗೆ ತಮ್ಮ ಮಕ್ಕಳ ಬಗ್ಗೆ ವಿಚಾರಣೆ ಮಾಡಿದರು. ಇದೇ ವಿಚಾರವಾಗಿ ಪ್ರಾಂಶುಪಾಲರು ಹಾಗೂ ಅವರ ಹೆತ್ತವರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಬಂದ ವಿಟ್ಲ ಠಾಣಾಧಿಕಾರಿ ಮಾಧವ ಕೂಡ್ಲು ಹಾಗೂ ಸಿಬ್ಬಂದಿ ವಾಸ್ತವ ವಿಚಾರವನ್ನು ಪೋಷಕರಿಗೆ ತಿಳಿಸಿಕೊಟ್ಟರು. ವಾರದೊಳಗೆ ಇನ್ನುಳಿದ ಐದು ವಿದ್ಯಾರ್ಥಿಗಳು ತಮ್ಮ ಹೆತ್ತವರೊಂದಿಗೆ ಬಂದು ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಿ ಬಾಂಡ್ ಪತ್ರಕ್ಕೆ ಸಹಿ ಹಾಕಿದ ಬಳಿಕ ತರಗತಿ ತೆರಳಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement