ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದು 'ಉತ್ತರಾಖಂಡ ಸಂತ್ರಸ್ತರ ನಿಧಿ ಸಮರ್ಪಣೆ'

Mainashree
Updated On : 27 Jul 2013, 10:21 am

ಮಂಗಳೂರು: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳ ಎಲ್ಲ ಸಹಕಾರಿ ಸಂಸ್ಥೆಗಳ ವತಿಯಿಂದ ಜು. 27 ರಂದು ಬೆಳಗ್ಗೆ 10.30ಕ್ಕೆ ಟಿ.ವಿ. ರಮಣ ಪೈ ಸಭಾಂಗಣದಲ್ಲಿ 'ಉತ್ತರಾಖಂಡ ಜಲಪ್ರಳಯ ಸಂತ್ರಸ್ತರ ನಿಧಿ ಸಮರ್ಪಣೆ' ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ರಾಜ್ಯ ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಸಂತ್ರಸ್ತರ ನಿಧಿ ಸ್ವೀಕರಿಸುವರು. ಅಲ್ಲದೆ ಈ ಸಂದರ್ಭ ನವೋದಯ ಸ್ವಸಹಾಯ ಗುಂಪುಗಳ ಸದಸ್ಯರ ಮಕ್ಕಳಿಗೆ ಅರಣ್ಯ ಸಚಿವ ರಮಾನಾಥ ರೈ ವಿದ್ಯಾರ್ಥಿ ವೇತನ ವಿತರಿಸುವರು. ಶಾಸಕ ಜೆ.ಆರ್.ಲೋಬೋ ಪಾಲ್ಗೊಳ್ಳುವರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement