ದಕ್ಷಿಣ ಕನ್ನಡ

ಕಡಂಬು- ಅನಿಲಕಟ್ಟೆ- ಪೊಲುಪ್ಪಾಡಿ ರಸ್ತೆ ದುರಸ್ತಿಗೆ ಸ್ಥಳೀಯರ ಆಗ್ರಹ

ವಿಟ್ಲ:  ವಿಟ್ಲ ಕಸಬಾ ಗ್ರಾಮದ ಕಡಂಬು- ಅನಿಲಕಟ್ಟೆ- ಪೂರ್ಲುಪ್ಪಾಡಿ ಜಿಲ್ಲಾ ಪಂಚಾಯಿತಿ ರಸ್ತೆ ಸಂಚಾರ ಯೋಗ್ಯವಾಗಿಲ್ಲ. ಈಗಾಗಲೇ ಮಂಜೂರಾಗಿರುವ 5 ಲಕ್ಷ ಅನುದಾನದಲ್ಲಿ ಕೂಡಲೇ ರಸ್ತೆ ದುರಸ್ತಿ ಮಾಡಿಕೊಡಬೇಕೆಂದು ಇಲ್ಲಿನ ನಾಗರಿಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ಸರ್ವೆ ನಂ. 535/3ಎ1ರಲ್ಲಿರುವ ಸರ್ಕಾರಿ ಜಮೀನಿನಲ್ಲಿರುವ ಸಂಪರ್ಕ ರಸ್ತೆ ನಿರ್ಮಾಣ ವಿಚಾರದಲ್ಲಿ ವಿಟ್ಲ- ಪಡ್ನೂರು ಗ್ರಾಮದ ಮೀನಾಕ್ಷಿ ಎಂಬವರು ಆಕ್ಷೇಪಣೆ ನಡೆಸಿದ್ದು, ಇದರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ಹೈಕೋರ್ಟ್ ಈ ಸ್ಥಳ ಸರ್ಕಾರದ್ದೆಂದು ತೀರ್ಪ ನೀಡಿದ್ದು, ಇದನ್ನು ಪ್ರಶ್ನಿಸಿ ಜಿಲ್ಲಾಧಿಕಾರಿಗೆ ಖಾಸಗಿ ಮೇಲ್ಮನವಿ ಸಲ್ಲಿಸಲಾಗಿತ್ತು. ಜಿಲ್ಲಾಧಿಕಾರಿಯವರು ಮತ್ತೆ ತಹಸೀಲ್ದಾರರಿಗೆ ಸ್ಪಷ್ಟೀಕರಣಕ್ಕೆ ಸೂಚಿಸಿದ್ದರು. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ತಹಸೀಲ್ದಾರರು ಇದು ಸರ್ಕಾರಿ ಸ್ಥಳವಾಗಿದ್ದು ಸಾರ್ವಜನಿಕ ಸಂಪರ್ಕ ರಸ್ತೆ ನಿರ್ಮಾಣಕ್ಕೆ ತೆರವುಗೊಳಿಸುವಂತೆ ಜಿಲ್ಲಾ ಕಾರ್ಯನಿರ್ವಾಹಕ ಎಂಜಿನಿಯರ್ ಇಲಾಖೆಗೆ ಸೂಚಿಸಿದೆ. ಹಾಗಾಗಿ ತಕ್ಷಣ ಸಂಬಂಧಪಟ್ಟ ವಿಟ್ಲ ಗ್ರಾಪಂ ರಸ್ತೆ ದುರಸ್ತಿಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ನಾಗರಿಕರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ