ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

'ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಸ್ತಾವನೆ'

Lingaraj Badiger
Updated On : 29 Jul 2013, 11:53 am

ಮಂಗಳೂರು: ಕಾರವಾರದಿಂದ ತಲಪಾಡಿವರೆಗೆ ಕರಾವಳಿ ತೀರ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಭಾನುವಾರ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ಈಗಾಗಲೇ ಮೂರು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಸಾಧ್ಯತೆ ಕುರಿತು ಚರ್ಚಿಸಿ ವಿಸ್ತೃತ ವರದಿ ಸಲ್ಲಿಸುವಂತೆ ಕೋರಲಾಗಿದೆ. ಇದರಿಂದ ಸಾಕಷ್ಟು ಉದ್ಯೋಗಾವಕಾಶ ದೊರಕಲಿದ್ದು, ಸರ್ಕಾರಕ್ಕೂ ಆದಾಯ ಸಿಗಲಿದೆ ಎಂದರು.
ಜಿಲ್ಲೆಯಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರವಾಸೋದ್ಯಮ ಬೆಳೆದಿಲ್ಲ. ಹಾಗಾಗಿ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ನೀಡುತ್ತಿದೆ ಎಂದರು. ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಇಲ್ಲಿನ ರಾಜಕೀಯ ನಾಯಕರು ಕಾರಣರಾಗಿದ್ದಾರೆ ಎಂದು ಹೇಳಿದ ದೇಶಪಾಂಡೆ, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವಂತೆ ಕಿವಿ ಮಾತು ಹೇಳಿದರು.
ಕಾಲೇಜಿನ ಯಾವುದೇ ಪ್ರಾಧ್ಯಾಪಕರು ರಾಜಕೀಯ ಹಾಗೂ ಇತರ ಸಂಘಟನೆಗಳ ಜತೆ ಗುರುತಿಸಿದೆ ವಿವಿ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಒಂದು ವೇಳೆ ಕಾಲೇಜಿನ ಆಡಳಿತ ಸಂಸ್ಥೆಗಳು ಗುರ್ತಿಸಿಕೊಂಡದ್ದು ಕಂಡುಬಂದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೋ, ಮುಖಂಡರಾದ ಐವನ್ ಡಿಸೋಜ, ವಿಜಯ ಕುಮಾರ್ ಶೆಟ್ಟಿ, ಪದ್ಮನಾಭ ನರಿಂಗಾನ, ಟಿ.ಕೆ.ಸುಧೀರ್, ಹೀಲ್ಡಾ ಆಳ್ವ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement