'ಕಾಲೇಜುಗಳಲ್ಲಿ ಶೈಕ್ಷಣಿಕ ಸಾಲ ಮೇಳ'
ಮಂಗಳೂರು: ಉನ್ನತ ವ್ಯಾಸಂಗ ಪ್ರೋತ್ಸಾಹಿಸಲು ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ 'ಶೈಕ್ಷಣಿಕ ಸಾಲ ಮೇಳ' ಹಮ್ಮಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಮಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಲ ಮೇಳದಿಂದ ಪದವಿ ವ್ಯಾಸಂಗಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಸೇರಬಹುದು. ಬ್ಯಾಂಕ್ಗಳು ಸಾಲ ನೀಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಬಡ ವಿದ್ಯಾರ್ಥಿಗಳು ಸಾಲ ಪಡೆದು ಶಿಕ್ಷಣ ಮುಂದುವರಿಸಲು ಕಷ್ಟವಾಗುತ್ತಿದೆ ಎಂದು ಅವರು ಹೇಳಿದರು.