ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆ

Rashmi Kasaragodu
Updated On : 2 Jun 2013, 12:54 pm

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪ ಮಣ್ಣಗುಂಡಿ ತಿರುವಿನಲ್ಲಿ ಅಡುಗೆ ಅನಿಲ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯಾದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ.
ಪೆರ್ನೆ ದುರ್ಘಟನೆ ಮಾಸುವ ಮೊದಲೇ ಮತ್ತೆ ಟ್ಯಾಂಕರ್ ಸೋರಿಕೆ ಕಂಡು ದುರಂತ ಮರುಕಳಿಸುವ ಭೀತಿ ಮೂಡಿಸಿತ್ತು. ಮಂಗಳೂರಿನಿಂದ ಅಡುಗೆ ಅನಿಲವನ್ನು ತುಂಬಿಸಾಗುತ್ತಿದ್ದ ಟ್ಯಾಂಕರ್‌ಗೆ ಶನಿವಾರ ಮುಂಜಾನೆ 6.30ರ ಸುಮಾರಿಗೆ ಮುಂಭಾಗದಿಂದ ವೇಗವಾಗಿ ಬಂದ ಲಾರಿ ಎದುರಾಯಿತೆನ್ನಲಾಗಿದೆ. ಈ ಸಂದರ್ಭದಲ್ಲಿ ಟ್ಯಾಂಕರ್ ಚಾಲಕ ಅಪಘಾತವನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕರ್ ರಸ್ತೆ ಬದಿಯ ಮಣ್ಣಿನಲ್ಲಿ ಜಾರಿ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಘಟನೆಯಿಂದ ಟ್ಯಾಂಕರ್ ಚಾಲಕ ಶಂಕರ್ ಮತ್ತು ಕ್ಲೀನರ್ ವರದರಾಜು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತಕ್ಕೀಡಾದ ಟ್ಯಾಂಕರ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದನ್ನು ಕಂಡ ಸ್ಥಳೀಯರು ರಕ್ಷಣೆಗಾಗಿ ಎಂಆರ್‌ಪಿಎಲ್ ಅಧಿಕಾರಿಗಳಿಗೆ ಸುದ್ದಿ ರವಾನಿಸಿದ್ದಾರೆ. ತುರ್ತು ನಿಯಂತ್ರಣಾ ಘಟಕವೊಂದು ಸ್ಥಳಕ್ಕಾಗಮಿಸಿ ಸಮಯ ವ್ಯಯಿಸಿ 10.30ರವರೆಗೆ ಯಾವುದೇ ರಕ್ಷಣಾ ಕಾರ್ಯಕ್ಕೆ ಮುಂದಾಗಲಿಲ್ಲ. ಇದು ಸ್ಥಳೀಯ ಆಕ್ರೋಶಕ್ಕೆ ಕಾರಣವಾಯಿತು.
ತಾತ್ಕಾಲಿಕ ನಿಯಂತ್ರಣ: ಜಿ.ಪಂ. ಸದಸ್ಯ ಬಾಲಕೃಷ್ಣ ಬಾಣಜಾಲು, ಲೋಕೇಶ್, ಕೆ.ಇ. ಅಬೂಬಕ್ಕರ್ ಮೊದಲಾದವರು ಟ್ಯಾಂಕರ್ ಬಿದ್ದ ಸ್ಥಳಕ್ಕೆ ಕೂಡಲೇ ಧಾವಿಸಿ ಬಂದು, ಸೋರಿಕೆಯಾಗುತ್ತಿರುವುದನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ಮುಂದಾದರು. ವಿಳಂಬವಾಗಿ ಬಂದ ಎಂಆರ್‌ಪಿಎಲ್ ಸೇಫ್ಟಿ ಆಫೀಸರ್ ಅಜಿತ್ ಎಂಬರನ್ನು ಸ್ಥಳೀಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಮೆಂಡೋನ್ಸಾ, ಉಪ್ಪಿನಂಗಡಿ ವೃತ್ತ ನಿರೀಕ್ಷಕ  ಸುರೇಶ್ ಕುಮಾರ್ ಮತ್ತು ಉಪನಿರೀಕ್ಷಕ ರವಿ, ಟ್ರಾಫಿಕ್ ಉಪನಿರೀಕ್ಷಕ ರಕ್ಷಿತ್, ನೆಲ್ಯಾಡಿ ಹೊರಠಾಣಾ ಪೋಲೀಸರು ಭದ್ರತಾ ಕಾರ್ಯದಲ್ಲಿ ತೊಡಗಿದರು. ಸುರಕ್ಷತಾ ಹಿನ್ನೆಲೆಯಲ್ಲಿ ಹೆದ್ದಾರಿಯ ವಾಹನ ಸಂಚಾರವನ್ನು ಬದಲಿ ಮಾರ್ಗದಲ್ಲಿ ವ್ಯವಸ್ಥೆಗೊಳಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement