ಸುಪ್ರೀಂ ನಿರ್ದೇಶನದಂತೆ ಗುಟ್ಕಾ ನಿಷೇಧ
ಪುತ್ತೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರ್ನಾಟಕದಲ್ಲಿ ಗುಟ್ಕಾ ನಿಷೇಧ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.
ಪುತ್ತೂರಿನ ಬಾಲವನಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದ ಸುಮಾರು 20 ರಾಜ್ಯಗಳಲ್ಲಿ ಈಗಾಗಲೇ ಗುಟ್ಕಾ ನಿಷೇಧವಾಗಿದೆ. ಕರ್ನಾಟಕದಲ್ಲೂ ಗುಟ್ಕಾ ನಿಷೇಧ ಮಾಡುವಂತೆ ಸುಪ್ರೀಂ ಕೋರ್ಟ್ನ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಅನಿವಾರ್ಯ ನಿಷೇಧಿಸಲಾಗಿದೆ. ಇದರಲ್ಲಿ ಅಡಕೆ ಬೆಳೆಗಾರರಿಗೆ ಯಾವುದೇ ಹೊಡೆತವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಅಡಕೆ ಬೆಳೆಗಾರರಿಗೆ ಹಿತಾಸಕ್ತಿಯನ್ನು ಕಾಯ್ದುಕೊಳ್ಳುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.