'ವೈದ್ಯ ಪದವೀಧರರಿಗೆ ಸರ್ಕಾರಿ ಆಸ್ಪತ್ರೆ ಕೆಲಸ ಕಡ್ಡಾಯಕ್ಕೆ ಚಿಂತನೆ'
ಪುತ್ತೂರು: ವೈದ್ಯ ಪದವಿ ಪಡೆದವರು ಕನಿಷ್ಠ 1 ವರ್ಷ ಸರ್ಕಾರಿ ಆಸ್ಪತ್ರೆಯಲ್ಲಿ ಕಡ್ಡಾಯ ಕೆಲಸ ಮಾಡುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ಅವರು, ಅಲ್ಲಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದರು. ಶಾಸಕಿ ಶಕುಂತಳಾ ಶೆಟ್ಟಿ ಆಸ್ಪತ್ರೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿದೆ. ಡಯಾಲಿಸಿಸ್ ಸೆಂಟರ್ ಆಗಬೇಕಿದೆ ಎಂದರು. ಇದಕ್ಕೆ ಉತ್ತರಿಸಿದ ಸಚಿವರು, ವೈದ್ಯ ಪದವಿ ಪಡೆದವರು ಆಸ್ಪತ್ರೆಯಲ್ಲಿ ಕಡ್ಡಾಯ ಕೆಲಸ ಮಾಡುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.