ನಾಳೆ ಸಿಇಟಿ ಕೌನ್ಸೆಲಿಂಗ್ ಮಾರ್ಗದರ್ಶನ ಶಿಬಿರ
ಮಂಗಳೂರು: ನಗರದ ಕೆರಿಯರ್ ಗೈಡೆನ್ಸ್ ಅಂಡ್ ಇನ್ಫಾರ್ಮೇಶನ್ ಸೆಂಟರ್ನಿಂದ ಹಿದಾಯಾ ಫೌಂಡೇಶನ್ ಸಹಯೋಗದಲ್ಲಿ ಸಿಇಟಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಪೂರ್ವ ಮಾರ್ಗದರ್ಶನ ಉಚಿತ ಶಿಬಿರ ಜೂ.5ರಂದು ನಡೆಯಲಿದೆ. ಬೆಳಗ್ಗೆ 9.30ಕ್ಕೆ ನಗರದ ಬದ್ರಿಯಾ ಪದವಿ ಕಾಲೇಜು ಸಭಾಂಗಣದಲ್ಲಿ ಶಿಬಿರ ನಡೆಯಲಿದ್ದು, ಮೆಡಿಕಲ್, ಡೆಂಟಲ್, ಆಯುರ್ವೇದ, ಹೋಮಿಯೋಪತಿ, ಯುನಾನಿ, ಯೋಗ ಮತ್ತು ನ್ಯೂಚುರೋಪತಿ ಹಾಗೂ ವಿವಿಧ ಎಂಜಿನಿಯರಿಂಗ್ ಕೋರ್ಸ್ಗಳಿಗೆ ನಡೆಯಲಿರುವ ಆನ್ಲೈನ್ ಕೌನ್ಸೆಲಿಂಗ್ ವಿಧಾನ, ನೋಂದಣಿಗೆ ಬೇಕಾದ ಕಾಗದಪತ್ರಗಳು, ಸೀಟುಗಳ ಆಯ್ಕೆ ಪ್ರಕ್ರಿಯೆ ಮತ್ತು ಇತರ ಪೂರಕ ಮಾಹಿತಿ ನೀಡಲಾಗುವುದು. ಆಸಕ್ತರು 9845054191ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.