7ರಿಂದ ಬಸ್ ಪಾಸ್ ವಿತರಣೆ
ಪುತ್ತೂರು: ಪ್ರತಿ ವರ್ಷದಂತೆ ಈ ಬಾರಿಯೂ ಕೆಎಸ್‌ಆರ್‌ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸು ವಿತರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. 2013-14ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 7ರಿಂದ, ಮೊದಲನೇ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲಾಗುತ್ತಿದೆ. ಪಾಸ್ ಅವಶ್ಯಕತೆ ಇರುವ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಫಾರಂಗಳನ್ನು ನಿಗದಿತ ಶುಲ್ಕದೊಂದಿಗೆ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ನಿಗಮಕ್ಕೆ ಸಲ್ಲಿಸಿ ಪಾಸುಗಳನ್ನು ಪಡೆದುಕೊಳ್ಳಲು ತಿಳಿಸಿರುವ ಅವರು, ಶೈಕ್ಷಣಿಕ ಸಂಸ್ಥೆಯಿಂದ ವಾಸಸ್ಥಳಕ್ಕೆ 60 ಕಿ.ಮೀ. ಗರಿಷ್ಠ ಅಂತರವಿರುವ ವಿದ್ಯಾರ್ಥಿಗಳು ಪಾಸು ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ ಎಂದು ಸೂಚಿಸಿದ್ದಾರೆ.