16ರಂದು ಸಚಿವ, ಶಾಸಕರಿಗೆ ಅಭಿನಂದನೆ
ಮೂಲ್ಕಿ: ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿಯ ಆಶ್ರಯದಲ್ಲಿ 16ರಂದು ಮಧ್ಯಾಹ್ನ ಮೂಲ್ಕಿಯ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಸಮಾಜದ ಸಚಿವ ಮತ್ತು ಶಾಸಕರಿಗೆ ಅಭಿನಂದನಾ ಸಮಾರಂಭವು ಜರಗಲಿದೆ. ಅಧ್ಯಕ್ಷತೆಯನ್ನು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ವಹಿಸಲಿದ್ದು, ಸಚಿವ ವಿನಯ ಕುಮಾರ್ ಸೊರಕೆ, ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ, ಕಾರ್ಕಳದ ಶಾಸಕ ವಿ. ಸುನೀಲ್ ಕುಮಾರ್ ಮತ್ತು ಬೈಂದೂರು ಶಾಸಕ ಗೋಪಾಲ ಪೂಜಾರಿಯವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.