ಸಾಂಕ್ರಾಮಿಕ ರೋಗ ನಿಯಂತ್ರಣ ಜಾಗೃತಿ ಜಾಥಾ
ಉಪ್ಪಿನಂಗಡಿ: ಧನ ದಾಹ ತೀರಿಸುವ ಭರದಲ್ಲಿ ಮನುಷ್ಯ ಆರೋಗ್ಯದ ಕಡೆಗೆ ಗಮನಕೊಡುವುದು ಕಡಿಮೆಯಾಗುತ್ತಿದೆ.ಈ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಆರೋಗ್ಯದ ಮಾಹಿತಿ ನೀಡುವ ಕಾರ್ಯಕ್ರಮ ಹೆಚ್ಚಾಗಿ ನಡೆಯಬೇಕು. ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮಾಹಿತಿ ಪಡೆದು ಆರೋಗ್ಯವಂತ ಜೀವನ ನಡೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮಾರಿ ವಾಸುದೇವನ್ ಹೇಳಿದರು. ಅವರು, ಕಡಬ ಗ್ರಾ.ಪಂ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಶುಕ್ರವಾರ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಡಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಮ್ ಹನೀಫ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಡಬ ತಹಶೀಲ್ದಾರ್ ಬಿ.ಸಿ. ಶಿವಪ್ಪ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.