ಸಿಕ್ಕಿ ಬಿದ್ದ ವಿಮಾನ ಪ್ರಯಾಣಿಕ
ಮಂಗಳೂರು: ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕಾಸರಗೋಡು ಕೊಲವಯ್ಯಾಲ್ ನಿವಾಸಿ ಶಬಾದ್ ಮಟ್ಟುಮಾಲ್ ಬಂಧಿತ. ಬಜಪೆ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ 3.36 ಲಕ್ಷ ಮೌಲ್ಯದ 157 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.