ಕಲಾಂ ಆಪ್ತ ಕಾರ್ಯದರ್ಶಿ ಕೊಲ್ಲೂರಿಗೆ ಭೇಟಿ
ಕೊಲ್ಲೂರು: ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆಪ್ತ ಕಾಯದರ್ಶಿ ಆರ್.ಕೆ. ಪ್ರಸಾದ್ ಅವರು ಕುಟುಂಬ ಸಮೇತರಾಗಿ ಗುರುವಾರ ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ, ರಾಜೇಶ್ ಎಂ. ಮತ್ತು ದೇವಳದ ಅಧೀಕ್ಷಕ ರಾಮಕೃಷ್ಣ ಅಡಿಗ ಇದ್ದರು.