ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮೂಲ್ಕಿ: ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗೃತಿ

Lingaraj Badiger
Updated On : 14 Jun 2013, 11:51 am

ಮೂಲ್ಕಿ: ನಗರ ಪಂಚಾಯಿತಿ ವತಿಯಿಂದ ಆರೋಗ್ಯ ಇಲಾಖೆಯ ಜೊತೆಗೂಡಿ ಮಳೆಗಾಲದ ಪೂರ್ವಭಾವಿಯಾಗಿ ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಮೂಲ್ಕಿಯಲ್ಲಿ ಇತ್ತೀಚೆಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.
ಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ಮಹಡಿ ಕಟ್ಟಡಗಳ ಕಾಮಾಗಾರಿ ಸ್ಥಳಕ್ಕೆ ಪಂಚಾಯಿತಿ ಅಧ್ಯಕ್ಷ ಹಾಗೂ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಸರದಲ್ಲಿ ನೀರು ನಿಂತಿರುವ ಬಗ್ಗೆ ಹಾಗೂ ಅನ್ನ ಪದಾರ್ಥಗಳನ್ನು ಬಿಸಾಡಿರುವ ಬಗ್ಗೆ  ಸಂಬಂಧ ಪಟ್ಟವರಿಗೆ ಎಚ್ಚರಿಕೆ ನೀಡಿದರು.
ಮಳೆಗಾಲ ಆರಂಭವಾಗಲಿರುವುದರಿಂದ ಕಟ್ಟಡ ನಿರ್ಮಾಣದ ಪರಿಸರದಲ್ಲಿ ನೀರು ನಿಂತು ಮಲೇರಿಯಾ ಮುಂತಾದ ರೋಗಗಳು ಹರಡುವ ಸಾಧ್ಯತೆಯಿದೆ.
ಈ ಬಗ್ಗೆ ಮುನ್ನೆಚ್ಚರಿಗೆ ವಹಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸುತ್ತಿದ್ದು ಮೂಲ್ಕಿ ನ.ಪಂ. ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಮುಖ್ಯಾಧಿಕಾರಿ ಹರಿಶ್ಚಂದ್ರ ಪಿ. ಸಾಲ್ಯಾನ್ ಮತ್ತು ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮೂಲ್ಕಿಯ ಕಾರ್ನಾಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ಮಹಡಿ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೀರು ನಿಂತಿರುವ ಬಗ್ಗೆ ಹಾಗೂ ಅನ್ನ ಪದಾರ್ಥಗಳನ್ನು ಎಸೆದಿರುವ ಬಗ್ಗೆ ತರಾಟೆಗೆ ತೆಗೆದುಕೊಂಡು ಕೂಡಲೇ ಸರಿಪಡಿಸುವಂತೆ ಹೇಳಿದರು.
ಮಳೆಗಾಲದಲ್ಲಿ ಸೀಯಾಳದ ತ್ಯಾಜ್ಯ ಎಸೆಯದಂತೆ ತಿಳಿಸಿದರು.
ಕಟ್ಟಡ ನಿರ್ಮಾಣ ಪ್ರದೇಶ: ಮೂಲ್ಕಿಯ ಬಪ್ಪನಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗುತ್ತಿರುವ ಬಹು ಮಹಡಿ ಕಟ್ಟಡ, ಮೂಲ್ಕಿಯ ಒಡೆಯರ ಬೆಟ್ಟುವಿನಲ್ಲಿ ನಿರ್ಮಾಣವಾಗುತ್ತಿರುವ ಕೆಲವು ಬಹು ಮಹಡಿ ಕಟ್ಟಡಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವ್ಯವಸ್ಥೆ ಬಗ್ಗೆ ಎಚ್ಚರಿಕೆ ನೀಡಿದರು.
ಬಹು ಮಹಡಿ ಕಟ್ಟಡಗಳು ನಿರ್ಮಾಣವಾಗುತ್ತಿರುವ ಪರಿಸರದಲ್ಲಿ ಮಲೇರಿಯಾ ರೋಗ ಹರಡುತ್ತಿದ್ದು ವಲಸೆ ಕಾರ್ಮಿಕರಿಂದ ರೋಗಗಳು ಹರಡುತ್ತಿದ್ದು  ಪರಿಸರದಲ್ಲಿ ಶುಚಿತ್ವದ ಕೊರತೆಯಿಂದ  ಹಾಗೂ ಒಳಚರಂಡಿ ವ್ಯವಸ್ಥೆಯಿಲ್ಲದಿರುವುದರಿಂದ ಚರಂಡಿಯಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುವ ಮೂಲಕ ಮಲೇರಿಯಾ ಮುಂತಾದ ರೋಗಗಳು ಹರಡುವ ಸಾಧ್ಯತೆಯಿದ್ದು ಈ ನಿಟ್ಟಿನಲ್ಲಿ ನಗರ ಪಂಚಾಯಿತಿ ಮುಂಜಾಗ್ರತೆ ವಹಿಸುವ ಕಾರ್ಯ ನಡೆಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement