ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಎತ್ತಿನಹೊಳೆ ಯೋಜನೆ ಸಕಾಲಿಕ ಕ್ರಮ: ಸಚಿವ ರೈ

Vishwanath S
Updated On : 16 Jun 2013, 11:08 am

ಮಂಗಳೂರು: ಎತ್ತಿನ ಹೊಳೆ ಯೋಜನೆಗೆ ಅನುಮತಿ ದೊರಕಿದೆ. ವೈಜ್ಞಾನಿಕ ಮಾಹಿತಿ ಸಿಕ್ಕದ ಪರಿಣಾಮ, ಜನತೆಗೆ ತೊಂದರೆಯಾಗದ ರೀತಿಯಲ್ಲಿ ಮುಂಜಾಗ್ರತೆ ವಹಿಸಲಾಗುವುದು ಎಂದು ಅರಣ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದ್ದಾರೆ.
 ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ವತಿಯಿಂದ ಶನಿವಾರ ಕೆಸಿಸಿಐ ಸಭಾಂಗಣದಲ್ಲಿ ನಡೆದ ಸಚಿವ ಹಾಗೂ ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಸಂಸ್ಥೆ ಸಲ್ಲಿಸಿದ ಮನವಿ  ಸ್ವೀಕರಿಸಿ ಮಾತನಾಡಿದರು.
 ಎತ್ತಿನಹೊಳೆ ಯೋಜನೆಯಲ್ಲಿ ನೇತ್ರಾವತಿ ನದಿ ತಿರುವಿನಿಂದ ಭೌಗೋಳಿಕವಾಗಿ ಅಂರ್ತಜಲ ಕುಸಿತ ಉಂಟಾಗಲಿದ್ದು, ಒಟ್ಟಾರೆ ಜನತೆಗೆ ಅನುಕೂಲವಾಗುವ ರೀತಿಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯ ಆರ್ಥಿಕ ಬೆಳವಣಿಗೆಯ ಹೆಬ್ಬಾಗಿಲಾಗಿರುವ ಶಿರಾಡಿಘಾಟಿ ರಸ್ತೆ ಕಾಮಗಾರಿಗೆ ಸರ್ಕಾರ ಚಿಂತನೆ ನಡೆಸಿದ್ದು, ಇದರ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಹೇಳಿದರು.
 ಸನ್ಮಾನ ಸ್ವೀಕರಿಸಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, ಕರಾವಳಿಗೆ ನಾಲ್ಕು ಮಂದಿ ಸಚಿವರು ಆಯ್ಕೆಯಾಗಿದ್ದು, ಪ್ರಮುಖ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಕಾರ್ಯಪ್ರವೃತ್ತವಾಗುವಂತೆ ನೋಡಿಕೊಳ್ಳಲಾಗುವುದು. ಉಳ್ಳಾಲದಲ್ಲಿ ಮೀನುಗಾರಿಕೆ ಬಂದರು ನಿರ್ಮಾಣಕ್ಕೆ ರು. 5ಕೋಟಿ ಬಿಡುಗಡೆಗೊಳಿಸಲಾಗಿದೆ ಎಂದರು.
 ಶಾಸಕ ಮೈದಿನ್ ಬಾವ ಮಾತನಾಡಿ, ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೊಡ್ಡ ವಿಮಾನ ಇಳಿಯಲು ಅವಕಾಶವಾಗುವಂಥ 300 ಮೀ ಉದ್ದದ ರನ್‌ವೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮೀನುಗಾರಿಕೆ ಸಚಿವ ಅಭಯಚಂದ್ರ ಜೈನ್, ಶಾಸಕ ಜೆ.ಆರ್. ಲೋಬೋ, ಕೆಸಿಸಿಐ ಅಧ್ಯಕ್ಷ ಮೊಹಮ್ಮದ್ ಅಮೀನ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement