ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಅರ್ಜಿ ಆಹ್ವಾನ

Lingaraj Badiger
Updated On : 17 Jun 2013, 12:22 pm

ಮಂಗಳೂರು: ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ವತಿಯಿಂದ ಐಎಂಸಿ ಕೋಟಾದಡಿ ಖಾಲಿಯಿರುವ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸದೆ ಇರುವ ಹಾಗೂ ಇತರೆ ಅಭ್ಯರ್ಥಿಗಳು ಐಎಂಸಿ(ಮ್ಯಾನೇಜ್‌ಮೆಂಟ್) ಕೋಟಾದಡಿ ಪ್ರವೇಶ ಪಡೆಯಬಹುದು. ಒಂದು ವರ್ಷದ ಅವಧಿಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರುವ ಅಭ್ಯರ್ಥಿಗಳಿಗೆ ಸಿಒಪಿಎ 12 ಸ್ಥಾನಗಳು ಹಾಗೂ   2 ವರ್ಷ ಅವಧಿಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರುವ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ 10 ಸ್ಥಾನಗಳು ಖಾಲಿಯಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 0824-2451539 ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯಕ್ತಿ ನಾಪತ್ತೆ: ಎರಡನೇ ಬಾರಿಗೆ ದೂರು ದಾಖಲು
ವಿಟ್ಲ: ವಿಟ್ಲ ಕಸಬಾ ಗ್ರಾಮದ ಈಶ್ವರ ಭಟ್ ಎಂಬವರ ಸಹೋದರ ಎನ್. ರಾಮ್ ಭಟ್ (55) ಎಂಬವರು ಮಾ.11ರಿಂದ ನಾಪತ್ತೆಯಾಗಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮ್ ಭಟ್ ಮಾ.11ರಂದು ಮನೆಯಲ್ಲಿ ಯಾರಲ್ಲೂ ಹೇಳದೆ ಹೋದವರು ವಾಪಸ್ ಬಂದಿಲ್ಲ. ಈ ಬಗ್ಗೆ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಮತ್ತೆ ಅವರ ಮನೆಯವರು ವಿಟ್ಲ ಠಾಣೆಗೆ 2ನೇ ಬಾರಿಗೆ ದೂರು ನೀಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಜೆಕಳದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಇಲ್ಲಿನ ನಿವಾಸಿ ಫೆಲಿಕ್ ಮಿನೇಜಸ್ (50) ಮೃತರು. ಜೀವನದಲ್ಲಿ ಜಿಗುಪ್ಸೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಆತ್ಮಹತ್ಯೆ
ಬಂಟ್ವಾಳ: ಇಲ್ಲಿನ ದೈಪಲ ನಿವಾಸಿ ಪುಷ್ಪ (30) ಎಂಬಾಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಕಾರಣ ತಿಳಿದು ಬಂದಿಲ್ಲ.
ಕುಸಿದು ಬಿದ್ದು ಸಾವು
ಸುಳ್ಯ: ಅಮರಪಡ್ನೂರು ಗ್ರಾಮದ ಕೋಟೆ ಬನ ತಿಮ್ಮಪ್ಪ ಗೌಡ ಎಂಬವರು ಶೇಣಿ- ಕಜೆಮೂಲೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments