ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದು ಸುರತ್ಕಲ್‌ನಲ್ಲಿ ಅಭಿವೃದ್ಧಿ ಸಭೆ

Lingaraj Badiger
Updated On : 17 Jun 2013, 12:18 pm

ಮಂಗಳೂರು: ಸುರತ್ಕಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಲುವಾಗಿ 'ಸುರತ್ಕಲ್ ಅಭಿವೃದ್ಧಿ ಸಮಿತಿ' ಅಸ್ತಿತ್ವಕ್ಕೆ ಬರಲಿದ್ದು, ಜೂ.17ರಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸಮಾಲೋಚನಾ ಸಭೆ ಏರ್ಪಡಿಸಲಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಶುಕ್ರವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ  ಮಧ್ಯಾಹ್ನ 2 ಗಂಟೆಗೆ ಸಮಾಲೋಚನಾ ಸಭೆ ನಡೆಯಲಿದೆ. ಚುನಾವಣೆಯಲ್ಲಿ ತಾನು ಜನತೆಗೆ ನೀಡಿದ ಆಶ್ವಾಸನೆಯಂತೆ ಮಾರುಕಟ್ಟೆ ನವೀಕರಣ, ಪಾರ್ಕಿಂಗ್ ವ್ಯವಸ್ಥೆ, ಬಸ್ ನಿಲ್ದಾಣ ರಚನೆ ಬಗ್ಗೆ ರೂಪುರೇಷೆ ತಯಾರಿಸಲಾಗುವುದು. ಮಾರುಕಟ್ಟೆ ಪ್ರತಿನಿಧಿಗಳು, ಖಾಸಗಿ ಚಾಲಕ ಮಾಲಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸುರತ್ಕಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹೌಸಿಂಗ್ ಬೋರ್ಡ್ ಅಥವಾ ಖಾಸಗಿ ಸಹಭಾಗಿತ್ವ ಅಥವಾ ಜಂಟಿ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗುವುದು ಎಂದರು.
ಶಿಥಿಲಾವಸ್ಥೆಯಲ್ಲಿರುವ ಸ್ಮಶಾನ ನವೀಕರಣ, ಅಗ್ನಿಶಾಮಕ ವ್ಯವಸ್ಥೆ, ಬೈಕಂಪಾಡಿಯಲ್ಲಿ ಸಣ್ಣ ಮಾರ್ಕೆಟ್, ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, 108 ಆ್ಯಂಬುಲೆನ್ಸ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement