ಶಾಸಕಿ ಶಕುಂತಳಾ ಶೆಟ್ಟಿ ಕಚೇರಿ ಉದ್ಘಾಟನೆ
ಪುತ್ತೂರು: ಪುತ್ತೂರು ತಾಲೂಕು ಪಂಚಾಯಿತಿ ಕಚೇರಿ ಬಳಿಯಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಅವರ ಕಚೇರಿಯನ್ನು ಮಾಜಿ ಶಾಸಕ ಕೆ. ರಾಮ ಭಟ್ ಉದ್ಘಾಟಿಸಿದರು.
ಶಾಸಕಿ ಶಕುಂತಳಾ ಶೆಟ್ಟಿ ಅವರು ಸಾಮರ್ಥ್ಯ ಸೌಧದ ಮೊದಲ ಮಹಡಿಯಲ್ಲಿ ವಿಶಾಲವಾದ ನೂತನ ಕಚೇರಿ ಆರಂಭಿಸಿದ್ದಾರೆ. ಶಾಸಕಿ ತಾನು ಪುತ್ತೂರಿನಲ್ಲಿದ್ದ ದಿನಗಳಲ್ಲಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿರುವುದಾಗಿ ಶಾಸಕಿ ತಿಳಿಸಿದರು.
ಪುತ್ತೂರು ತಹಸೀಲ್ದಾರ್ ಎಂ.ಟಿ. ಕುಳ್ಳೇ ಗೌಡ ಇದ್ದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ. ಹೇಮನಾಥ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ, ಯುವಕ ಕಾಂಗ್ರೆಸ್ ಅಧ್ಯಕ್ಷ ಶ್ರೀರಾಂ ಪಕ್ಕಳ, ಪುರಸಭಾ ಸದಸ್ಯರಾದ ಮಹಮ್ಮದ್ ಆಲಿ, ಜಗನ್ನಾಥ್ ಶೆಟ್ಟಿ ನೆಲ್ಲಿಕಟ್ಟೆ, ಪುರಸಭಾ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ್ ರೈ, ಲೋಕೇಶ್ ಹೆಗ್ಡೆ, ತಾ.ಪಂ. ಮಾಜಿ ಬನಾರಿ ಗೋಪಾಲಕೃಷ್ಣ ಭಟ್, ತಾ.ಪಂ. ಮಾಜಿ ಉಪಾಧ್ಯಕ್ಷ ಬೈತಡ್ಕ ಶೀನಪ್ಪ ಗೌಡ, ಶಿವನಾಥ್ ರೈ ಮೇಗಿನಗುತ್ತು, ತಾ.ಪಂ. ಸದಸ್ಯ ಮಹಮ್ಮದ್ ಬಡಗನ್ನೂರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಮೇರ್ಲ, ತಾಲೂಕು ಹಿಂದುಳಿದ ಘಟಕದ ಅಧ್ಯಕ್ಷ ಹೊನ್ನಪ್ಪ ಪೂಜಾರಿ, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಸಾಬಾಸಾಹೇಬ್ ಪಾಲ್ತಾಡ್ ಪಾಲ್ಗೊಂಡರು.