ನೌಕಾದಳ ಪ್ರವೇಶ ಪರೀಕ್ಷೆ: 5ರಿಂದ ಪೂರ್ವಭಾವಿ ತರಬೇತಿ
ಮೂಲ್ಕಿ: ಭಾರತೀಯ ನೌಕಾದಳದಲ್ಲಿ ನಾವಿಕ ಹುದ್ದೆಗಳ ನೇಮಕಾತಿಗಾಗಿ ಪ್ರವೇಶ ಪರೀಕ್ಷೆಯು ಮಾ.15ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆ ಮಂಗಳೂರು ವತಿಯಿಂದ ಪ್ರವೇಶ ಪರೀಕ್ಷೆಗೆ ಪೂರ್ವಭಾವಿಯಾಗಿ ಮಾ.5ರಿಂದ 9ರವರೆಗೆ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮೂಲ್ಕಿಯ ವಿಜಯ ಕಾಲೇಜಿನಲ್ಲಿ ಪರೀಕ್ಷೆಯ ಪೂರ್ವಭಾವಿ ತರಬೇತಿ ಉಚಿತವಾಗಿ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ತರಬೇತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮೂಲ್ಕಿ ವಿಜಯ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.