ಮೂವರು ಭ್ರಷ್ಟರು ಲೋಕಾ ಬಲೆಗೆ
ಮಂಗಳೂರು: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ಉಗ್ರಾಣದಲ್ಲಿ ಲಂಚ ತಿಂದು ಬೆಳೆದ ಹೆಗ್ಗಣಗಳನ್ನು ಲೋಕಾಯುಕ್ತ ಪೊಲೀಸರು ಬೇಟೆಯಾಡಿದ್ದಾರೆ. ನ್ಯಾಯಬೆಲೆ ಅಂಗಡಿಗಳಿಂದ ಲಂಚ ಸಂಗ್ರಹಿಸಿ ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಬಳಿಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ 45 ಸಾವಿರ ನೀಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಗೆ ಮೂವರು ಸಿಕ್ಕಿ ಬಿದ್ದಿದ್ದಾರೆ. ಮ್ಯಾನೇಜರ್ ಮುರಳೀಧರ ರಾವ್, ಸ್ಥಳೀಯ ಡಿಪೊ ವ್ಯವಸ್ಥಾಪಕ ಪುಟ್ಟಲಿಂಗಯ್ಯ, ಬೆಳ್ತಂಗಡಿ ಡಿಪೊ ವ್ಯವಸ್ಥಾಪಕ ಜಯವರ್ಧನ ಅಜಯ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸರು 45 ಸಾವಿರ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.