ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಆಕಸ್ಮಿಕ ಬೆಂಕಿ: ಏಳು ಗುಡಿಸಲು ಭಸ್ಮ

Parashurama
Updated On : 4 Mar 2013, 12:55 pm

ಚಾಮರಾಜನಗರ: ತಾಲೂಕಿನ ವೆಂಕಟಯ್ಯನ ಛತ್ರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಏಳು ಗುಡಿಸಲು ಭಸ್ಮವಾಗಿವೆ.
ಗ್ರಾಮದ ಉಪ್ಪಾರ ಬಡಾವಣೆಯ ಚೆನ್ನಪ್ಪಶೆಟ್ಟಿ, ಗುಂಡಶೆಟ್ಟಿ, ಸಿದ್ದಶೆಟ್ಟಿ, ದೊಡ್ಡಬಸಮ್ಮ ನಂಜುಂಡಶೆಟ್ಟಿ, ಸುಬ್ಬಶೆಟ್ಟಿ, ಬಲ್ಲಮ್ಮ ಎಂಬುವರ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ, ಗುಡಿಸಲುಗಳು ಸಂಪೂರ್ಣ ಭಸ್ಮವಾಗಿದ್ದು, ಗುಡಿಸಲಿನಲ್ಲಿದ್ದ ದಿನನಿತ್ಯದ ಅಗತ್ಯ ವಸ್ತುಗಳು, ದವಸ ಧಾನ್ಯ, ಬಟ್ಟೆ ಬರೆ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಗುಡಿಸಲುಗಳು ಆಕ್ಕ ಪಕ್ಕದಲ್ಲಿದ್ದರಿಂದ ಬೆಂಕಿಯ ಕೆನ್ನಾಲಿಗೆ ಒಂದರಿಂದ ಮತ್ತೊಂದು ಗುಡಿಸಲಿಗೆ ಚಾಚಿದೆ. ಗುಡಿಸಲು ವಾಸಿಗಳು ದನಕರುಗಳೊಂದಿಗೆ ಜಮೀನು ಮತ್ತು ಕೂಲಿಗೆ ತೆರಳಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿ ಸತತ ಒಂದು ಗಂಟೆಗಳ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದರು. ಅವರಿಗೆ ಗ್ರಾಮಸ್ಥರು ನೆರವಾದರು. ಅಗ್ನಿಶಾಮಕ ದಳದ ಶಿವರುದ್ರಶೆಟ್ಟಿ ಮತ್ತು ದೇವಣ್ಣೇಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮನೆ ನಿರ್ಮಿಸಿಕೊಡಲು ಸೂಚನೆ: ವೆಂಕಟಯ್ಯನ ಛತ್ರದಲ್ಲಿ ಗುಡಿಸಲುಗಳಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದಂತೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಶಾಸಕ ಸಿ. ಪುಟ್ಟರಂಗಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಡಿಸಲು ಕಳೆದುಕೊಂಡವರಿಗೆ ಸಾಂತ್ವಾನ ಹೇಳಿದರು. ನಂತರ ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಗುಡಿಸಲು ಕಳೆದುಕೊಂಡ ನಿವಾಸಿಗಳಿಗೆ ಮನೆ ನಿರ್ಮಿಸಿಕೊಡುವಂತೆ ಸೂಚನೆ ನೀಡಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೈ ಕೃಷ್ಣ, ಜಿಪಂ ಸದಸ್ಯೆ ಕಾವೇರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments