ಗಾಂಜಾ ಮಾರಾಟ ಜಾಲ ಪ್ರಮುಖ ಸೆರೆ
ಮಂಗಳೂರು: ಗಾಂಜಾ ಮಾರಾಟ ಜಾಲದ ಪ್ರಮುಖ ಮಾಡೂರು ನಾಸಿರ್ನನ್ನು ಗ್ರಾಮಾಂತರ ಪೊಲೀಸರು ನಗರದಲ್ಲಿ ಮಂಗಳವಾರ ಬಂಧಿಸಿದ್ದಾರೆ.
ಆರೋಪಿಯಿಂದ 1.1 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸೋಮವಾರ ರಾತ್ರಿ ಪಂಪ್ವೆಲ್ ಬಳಿ ಗಾಂಜಾ ಹಿಡಿದು ಮಾರಾಟಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ನಾಯಕ್ ಮತ್ತು ಎಸ್ಐ ಸುಧಾಕರ್ ಬಂಧಿಸಿದರು. ಆರೋಪಿ ಕೃತ್ಯಕ್ಕೆ ಬಳಸುತ್ತಿದ್ದ ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈತ ಮಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದವರಲ್ಲಿ ಮುಂಚೂಣಿಯಲ್ಲಿದ್ದಾನೆ. ತನಿಖೆ ನಡೆಸಿದರೆ ಮಹತ್ತರ ವಿವರಗಳು ಹೊರಬೀಳುವ ಸಾಧ್ಯತೆ ಇದೆ. ಮಂಗಳವಾರ ಕೋರ್ಟ್ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.