ಗಾಂಜಾ ಮಾರಾಟ ಜಾಲ ಪ್ರಮುಖ ಸೆರೆ
ಮಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಜಾಲದ ಪ್ರಮುಖ ಮಾಡೂರು ನಾಸಿರ್ನನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ 1.1 ಕಿಲೊ ಗಾಂಜಾ ವಶಕ್ಕೆ ತೆಗೆದುಕೊಂಡಿದ್ದಾರೆ. ಸೋಮವಾರ ರಾತ್ರಿ ಪಂಪ್ವೆಲ್ ಬಳಿ ಗಾಂಜಾ ಹಿಡಿದು ಮಾರಾಟಕ್ಕೆ ಹೊಂಚುಹಾಕುತ್ತಿದ್ದ ವೇಳೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ನಾಯಕ್ ಮತ್ತು ಎಸ್ಐ ಸುಧಾಕರ್ ಬಂಧಿಸಿದರು.
ಆರೋಪಿ ಕೃತ್ಯಕ್ಕೆ ಬಳಸುತ್ತಿದ್ದ ಆಲ್ಟೊ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈತ ಮಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುವವರಲ್ಲಿ ಮುಂಚೂಣಿಯಲ್ಲಿದ್ದಾನೆ. ಈತನನ್ನು ಪೊಲೀಸರು ಸರಿಯಾಗಿ ತನಿಖೆ ನಡೆಸಿದರೆ ಮಹತ್ತರ ವಿವರಗಳು ಹೊರಬೀಳುವ ಸಾಧ್ಯತೆ ಇದೆ. ಪೊಲೀಸರು ಆರೋಪಿಯನ್ನು ಮಂಗಳವಾರ ಕೋರ್ಟ್ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.