ಆಳ್ವಾಸ್ ಕ್ರೀಡಾ ಹಾಸ್ಟೆಲ್ಗೆ ಅರ್ಜಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಕ್ರೀಡಾ ಹಾಸ್ಟೆಲ್ಗೆ ಅರ್ಜಿ ಆಹ್ವಾನಿಸಲಾಗಿದೆ. 2013-2014ನೇ ಸಾಲಿಗೆ ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಉನ್ನತ ವ್ಯಾಸಂಗದ ತರಗತಿಗೆ ದಾಖಲಾತಿ ಬಯಸುವ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಾಗೂ ಮಾಡಲಿಚ್ಛಿಸುವ ಕ್ರೀಡಾಪಟುಗಳು ಮಾ.31ರೊಳಗೆ ತಮ್ಮ ವಿಳಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ, ಭಾವಚಿತ್ರ ಸಹಿತ ತಮ್ಮ ಸ್ವವಿವರಗಳೊಂದಿಗೆ ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ- 574227, ದ.ಕ. ಜಿಲ್ಲೆಈ ವಿಳಾಸಕ್ಕೆ ಅರ್ಜಿ ಸಲ್ಲಿಸುವಂತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9620387666, 8971143057, 9686919701 ಸಂಪರ್ಕಿಸಿ.