ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದು ಗಂಗೊಳ್ಳಿಯಲ್ಲಿ ಮಹಾಶಿವರಾತ್ರಿ

Parashurama
Updated On : 10 Mar 2013, 12:58 pm

ಕುಂದಾಪುರ: ಗಂಗೊಳ್ಳಿಯ ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.10ರಂದು ಮಹಾಶಿವರಾತ್ರಿ ಉತ್ಸವ ನಡೆಯಲಿದೆ. ಶಿವರಾತ್ರಿ ಮಹೋತ್ಸವದ ಅಂಗವಾಗಿ ಶ್ರೀದೇವರಿಗೆ ಶತರುದ್ರಾಭಿಷೇಕ, ಜಲಾಭಿಷೇಕ, ರುದ್ರಾಭಿಷೇಕ, ಬಿಲ್ವಾರ್ಚನೆ, ರಾತ್ರಿ 8 ಗಂಟೆಯಿಂದ ಅಹೋರಾತ್ರಿ ಭಜನೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
'ರಾಷ್ಟ್ರೀಯ ಸೇವಾ ಯೋಜನೆ' ಪ್ರಶಿಕ್ಷಣ
ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನೆಯು ಮಹಾತ್ಮಗಾಂಧೀಜಿಯವರ ಕನಸಿನ ಕೂಸಾಗಿದೆ ಎಂದು ಭಂಡಾರ್‌ಕರ್ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಸತ್ಯನಾರಾಯಣ ಹೇಳಿದರು. ಇವರು ಭಂಡಾರ್‌ಕರ್ ಕಾಲೇಜಿನ ಅಧ್ಯಯನ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮುಕ್ತವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಪ್ರಶಿಕ್ಷಣ ನೀಡಿ ಮಾತನಾಡಿದರು. ಶೈಲಜಾ, ಜಯಸುಧಾ, ಗಾಯತ್ರಿ, ಸುಜಾತಾ ಶೆಟ್ಟಿ, ನಾಗರತ್ನ, ಜಯಶ್ರೀ ಇವರು ಎನ್.ಎಸ್.ಎಸ್ ಗೀತೆಗಳ ತರಬೇತಿ ನೀಡಿದರು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments