ಅರಣ್ಯ ಹಕ್ಕುಪತ್ರಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಪರಿಶಿಷ್ಟ ಪಂಗಡ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳು ಅರಣ್ಯ ಹಕ್ಕು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಗ್ರಾಮ ಪಂಚಾಯ್ತಿನಿಂದ ಪಡೆದು, ನಿಗದಿತ ದಾಖಲೆಯೊಂದಿಗೆ ಪಂಚಾಯ್ತಿ ಕಾರ್ಯಾಲಯಕ್ಕೆ ಸಲ್ಲಿಸಬಹುದು. ಅರ್ಜಿಯನ್ನು ಕ್ರೋಢಿಕರಿಸಿ ಸಂಬಂಧಿತ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ಪರಿಶೀಲಿಸಿ ಗ್ರಾಮಸಭೆಯಲ್ಲಿ ಮಂಡಿಸಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು.