ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಪಾಲ್ತಾಡಿ: ಅಕ್ರಮ ಬೇಲಿ ತೆರವು

Lingaraj Badiger
Updated On : 16 Mar 2013, 11:40 am

ಪುತ್ತೂರು: ಸವಣೂರು ಗ್ರಾ.ಪಂ. ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ  ನಡೆಯುತ್ತಿದ್ದ ಸಾರ್ವಜನಿಕ ರಸ್ತೆ ಕಾಮಗಾರಿಗೆ ಅಕ್ರಮವಾಗಿ ಬೇಲಿ ನಿರ್ಮಿಸಿ ತಡೆಯೊಡ್ಡಿದ ವ್ಯಕ್ತಿಯೇ   ಅಕ್ರಮವಾಗಿ ನಿರ್ಮಿಸಲಾಗಿದ್ದ ಬೇಲಿಯನ್ನು ಗುರುವಾರ ಪಂಚಾಯಿತಿ ಆಡಳಿತದ ಸೂಚನೆಯ ಮೇರೆಗೆ ತೆರವುಗೊಳಿಸಿ ಕಾಮಗಾರಿಗೆ ಅನುವು ಮಾಡಿಕೊಟ್ಟಿದ್ದಾರೆ. ಗ್ರಾಮದ ಅಂಕತ್ತಡ್ಕ- ಹಸಂತಡ್ಕ ಸಂಪರ್ಕ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಪಾಲ್ತಾಡಿ ಶಾಲಾ ಬಳಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಬೇಲಿ ನಿರ್ಮಿಸಿ ರಸ್ತೆ ಕಾಮಗಾರಿಗೆ ತಡೆಯೊಡ್ಡಿದ್ದರು. ಈ ಕುರಿತು ಪಂಚಾಯತಿಗೆ ಸಾರ್ವಜನಿಕರು ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಬೇಲಿ ತೆರವುಗೊಳಿಸುವಂತೆ ಬೇಲಿ ನಿರ್ಮಿಸಿದವರಿಗೆ ಪಂಚಾಯಿತಿ ಆಡಳಿತ ಸೂಚನೆ ನೀಡಿತ್ತು. ಅದರಂತೆ ಬೇಲಿಯನ್ನು ತೆರವುಗೊಳಿಸಿ ರಸ್ತೆ ಕಾಮಗಾರಿಗೆ ಅನುವು ಮಾಡಿಕೊಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement