ಬೈಕ್ ಸ್ಕಿಡ್: ಹಿಂಬದಿ ಸವಾರ ಸಾವು
ಉಪ್ಪಿನಂಗಡಿ: ಇಲ್ಲಿನ ಸಮೀಪದ ನೆಲ್ಯಾಡಿಯ ಆರ್ಲ ಎಂಬಲ್ಲಿ ರಾ.ಹೆ. 75 ರಲ್ಲಿ ಬೈಕೊಂದು ಅಪಘಾತಕ್ಕೀಡಾಗಿ ಬೈಕ್ ಹಿಂಬದಿ ಸವಾರ ಸಂದೀಪ್ (17) ಸಾವನ್ನಪ್ಪಿದ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ನೆಲ್ಯಾಡಿಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಸಂದೀಪ್ ತನ್ನ ಗೆಳೆಯ ಸತೀಶ್ ನೆಡಗೂಡಿ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿತ್ತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಸಂದೀಪ್ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಶುಕ್ರವಾರ ಮೃತಪಟ್ಟಿದ್ದಾರೆ.
ಮೃತ ಸಂದೀಪ್ ಬೆಳ್ತಂಗಡಿ ತಾಲೂಕಿನ ಬಾಜಾರ ನಿವಾಸಿ ಎನ್ನಲಾಗಿದ್ದು, ಪುತ್ತೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಡಿಕ್ಕಿ: ಪಾದಚಾರಿ ಸಾವು
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪುಳಿತ್ತಡಿ ಎಂಬಲ್ಲಿ ಕೆಲ ದಿನಗಳ ಹಿಂದೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಪಾದಚಾರಿ ಕೂಸಪ್ಪ (75) ಎಂಬವರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಸಾವನ್ನಪ್ಪಿದರು.
ಕೆಲ ದಿನಗಳ ಹಿಂದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಸಪ್ಪ ಅವರಿಗೆ ಬಾಲಕೃಷ್ಣ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತ ಪಟ್ಟರು.
ಪುತ್ತೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.