ಪರಸ್ಪರ ಹಲ್ಲೆ: ಇಬ್ಬರು ಆಸ್ಪತ್ರೆಗೆ
ಪುತ್ತೂರು: ಪರಸ್ಪರ ಹಲ್ಲೆ ನಡೆದು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ತಿಂಗಳಾಡಿಯ ಖಲಂದರ್ ಕಾಂಪ್ಲೆಕ್ಸ್ನ ಮಾಲೀಕ ಇಸ್ಮಾಯಿಲ್ (44) ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದು, ಇನ್ನೊಂದು ಕಾಂಪ್ಲೆಕ್ಸ್ನ ಮಾಲೀಕ ಚಿದಾನಂದ ಆಚಾರ್ಯ (54) ಅವರು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾನು ಸೆಲೂನ್ಗೆ ಹೋಗಿದ್ದ ವೇಳೆ ಪಕ್ಕದ ಕಾಂಪ್ಲೆಕ್ಸ್ನ ಮಾಲೀಕ ಚಿದಾನಂದ ಆಚಾರ್ಯ ಮತ್ತವರ ಪುತ್ರರಿಬ್ಬರು ಸೇರಿಕೊಂಡು ಮರದ ಸಲಾಕೆಯಿಂದ ಹೊಡೆದು ಹಲ್ಲೆ ನಡೆಸಿರುವುದಾಗಿ ಇಸ್ಮಾಯಿಲ್ ಆರೋಪಿಸಿದ್ದಾರೆ.
ತಾನು ತನ್ನ ಅಂಗಡಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಇಸ್ಮಾಯಿಲ್ ತನಗೆ ಚೂರಿಯಿಂದ ತಿವಿದು ಹಲ್ಲೆ ನಡೆಸಿರುವುದಾಗಿ ಚಿದಾನಂದ ಆಚಾರ್ಯ ಪ್ರತ್ಯಾರೋಪ ಮಾಡಿದ್ದಾರೆ. ಸಂಪ್ಯ ಪೊಲೀಸರು ಇತ್ತಂಡದ ದೂರು ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.