ಪಿಯುಸಿ ಪರೀಕ್ಷೆ: 12 ಮಂದಿ ಗೈರು (ಸುದ್ದಿ ಸಂಕ್ಷೇಪ)
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶನಿವಾರ ನಡೆದ ದ್ವಿತೀಯ ಪಿಯುಸಿ ಗಣಿತ, ಕನ್ನಡ ಮತ್ತು ಗೃಹ ವಿಜ್ಞಾನ ಪರೀಕ್ಷೆಗೆ ಒಟ್ಟು 12 ಮಂದಿ ಗೈರಾಗಿದ್ದಾರೆ.
ಒಟ್ಟು 690 ಮಂದಿ ಪೈಕಿ 10 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದು, 680 ಮಂದಿ ಹಾಜರಾಗಿದ್ದಾರೆ. ಕನ್ನಡ ಪರೀಕ್ಷೆಗೆ 169 ಮಂದಿಯಲ್ಲಿ ಒಬ್ಬ ವಿದ್ಯಾರ್ಥಿಗೈರಾಗಿದ್ದಾನೆ. ಗೃಹ ವಿಜ್ಞಾನ ಪರೀಕ್ಷೆಗೆ 37 ಮಂದಿಯಲ್ಲಿ ಒಬ್ಬ ಗೈರಾಗಿದ್ದಾನೆ ಎಂದು ಪಿಯು ಬೋರ್ಡ್ ಪ್ರಕಟಣೆ ತಿಳಿಸಿದೆ.
ಜಾನಪದ ಅಕಾಡೆಮಿಗೆ ಸಹ ಸದಸ್ಯರ ನೇಮಕ
ಮಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಡಾ.ಬಾನಂದೂರು ಕೆಂಪಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ 3 ಮಂದಿ ಜಾನಪದ ತಜ್ಞರನ್ನು ಅಕಾಡೆಮಿ ಸಹ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.
ಹಾವೇರಿಯ ಕರ್ನಾಟಕ ವಿವಿ ಸ್ನಾತಕೋತ್ತರ ಕೇಂದ್ರ ಪ್ರಾಧ್ಯಾಪಕ ಡಾ.ಮುದೇನೂರು ನಿಂಗಪ್ಪ, ಕುವೆಂಪು ವಿವಿ ಶಿವಮೊಗ್ಗದ ಡಾ.ಮುತ್ತಯ್ಯ, ಮಂಗಳೂರು ವಿವಿ ಪ್ರಾಧ್ಯಾಪಕ ಡಾ.ಅಭಯ ಕುಮಾರ್ ನೇಮಕಗೊಂಡವರು ಎಂದು ಅಕಾಡೆಮಿ ರಿಜಿಸ್ಟ್ರಾರ್ ಬಿ.ಎನ್.ಪರಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.