ಬಲಿಪಗೆ 'ಕುರಿಯ ಪ್ರಶಸ್ತಿ' ಪ್ರದಾನ
ಮಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕುರಿಯ ವಿಠಲಶಾಸ್ತ್ರಿ ಸ್ಮಾರಕ ದತ್ತಿ ಸಂಸ್ಥೆ ಹಾಗೂ ಕಲ್ಕೂರ ಪ್ರತಿಷ್ಠಾನ ಆಶ್ರಯದಲ್ಲಿ ತೆಂಕು ತಿಟ್ಟಿನ ಅಗ್ರಮಾನ್ಯ ಭಾಗವತ ಬಲಿಪ ನಾರಾಯಣ ಭಾಗವತರಿಗೆ ಕುರಿಯ ವಿಠಲಶಾಸ್ತ್ರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರು ಪುರಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ಬಲಿಪರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅಭಿನಂದನಾ ಭಾಷಣ ಮಾಡಿದರು. ಶ್ರೀಧರ ಐತಾಳ್ ಕುರಿಯ ಸಂಸ್ಮರಣೆ ಮಾಡಿದರು.
ಇದೇ ಸಂದರ್ಭ ಯಕ್ಷಗಾನ ಸ್ತ್ರೀವೇಷಧಾರಿ ಪುಂಡರೀಕಾಕ್ಷ ಉಪಾಧ್ಯ ಮತ್ತು ನೆಲ್ಲಿಕಟ್ಟೆ ನಾರಾಯಣ ಹಾಸ್ಯಗಾರರನ್ನು ಸನ್ಮಾನಿಸಲಾಯಿತು. ಸ್ತ್ರೀವೇಷಧಾರಿ ಅಂಬಾ ಪ್ರಸಾದ್ ಪಾತಾಳರಿಗೆ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಲ್ಲದೆ 'ಪಾತಾಳ ಮಣಿ ಅಂಬಾಪ್ರಸಾದ-50' ಕೃತಿ ಬಿಡುಗಡೆ ಮಾಡಲಾಯಿತು. ಕುರಿಯ ಶಾಸ್ತ್ರಿಗಳ ಪುತ್ರ ವೆಂಕಟ್ರಮಣ ಶಾಸ್ತ್ರಿ, ಕರ್ಣಾಟಕ ಬ್ಯಾಂಕ್ ಡಿಜಿಎಂ ರಮೇಶ್ ರಾವ್, ಬಿಎಸ್ಎನ್ಎಲ್ ಡಿಜಿಎಂ ಎಸ್.ಎಂ.ಹೆಗ್ಡೆ, ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.