ಚಿನ್ನದ ಮೇಲೆ ಅಲ್ಪ ಹೂಡಿಕೆ ಸುರಕ್ಷಿತ
ಮಂಗಳೂರು: ಇತ್ತೀಚೆಗೆ ಚಿನ್ನದ ಬೆಲೆ ಏರಿಕೆಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವುದು ಸುರಕ್ಷಿತ ಎಂದು ನಿಟ್ಟೆ ಮ್ಯಾನೇಜ್ಮೆಂಟ್ ವಿದ್ಯಾಲಯದ ಉಪನ್ಯಾಸಕ ಪ್ರೊ. ರಾಧಾಕೃಷ್ಣ ಶರ್ಮ ಹೇಳಿದ್ದಾರೆ. ಭಾರತ ಸರ್ಕಾರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ವತಿಯಿಂದ ಶನಿವಾರ ಕರ್ಣಾಟಕ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾರುಕಟ್ಟೆ ವ್ಯವಹಾರವು ಇತ್ತೀಚೆಗೆ ಕುಸಿಯಲ್ಪಟ್ಟಿದ್ದು 5 ವರ್ಷ ಅವಧಿಯ ಹೂಡಿಕೆಯಿಂದ ನಷ್ಟ ಸಂಭವಿಸುವ ಸಾಧ್ಯತೆಯಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಾಗ ಹೆಚ್ಚು ವರ್ಷದ ಅವಧಿಯ ಷೇರನ್ನು ಆಯ್ಕೆ ಮಾಡುವುದು ಉತ್ತಮ. ಒಂದೇ ಕಂಪನಿಗಳಲ್ಲಿ ಹಣವನ್ನು ಹೂಡಿಕೆ ಮಾಡುವುದರ ಬದಲು ಬೇರೆ ಬೇರೆ ಕಂಪನಿಗಳನ್ನು ಆಯ್ಕೆ ಮಾಡುವುದು ಉತ್ತಮ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.